ನ್ಯೂಜಿಲ್ಯಾಂಡ್ ತಂಡ 
ಕ್ರಿಕೆಟ್

ODI ವಿಶ್ವಕಪ್ 2023: ನೆದರ್ಲ್ಯಾಂಡ್ ವಿರುದ್ಧ 99 ರನ್ ಗಳಿಂದ ಗೆದ್ದ ನ್ಯೂಜಿಲ್ಯಾಂಡ್!

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸತತ ಎರಡನೇ ಪಂದ್ಯವನ್ನು ಗೆದ್ದು ಬೀಗಿದೆ. 

ಹೈದರಾಬಾದ್: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸತತ ಎರಡನೇ ಪಂದ್ಯವನ್ನು ಗೆದ್ದು ಬೀಗಿದೆ. 

ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧ ನ್ಯೂಜಿಲ್ಯಾಂಡ್ 99 ರನ್ ಗಳಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿತ್ತು. 

ಕಿವೀಸ್ ನೀಡಿದ 323 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ನೆದರ್ಲ್ಯಾಂಡ್ ತಂಡ 46.3 ಓವರ್ ನಲ್ಲಿ 223 ರನ್ ಗಳಿಗೆ ಸರ್ವಪತನ ಕಂಡಿತ್ತು. ಈ ಮೂಲಕ ನ್ಯೂಜಿಲ್ಯಾಂಡ್ 99 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. 

ನ್ಯೂಜಿಲ್ಯಾಂಡ್ ಪರ ಕಾನ್ವೇ 32, ವಿಲ್ ಯಂಗ್ 70, ರಚಿನ್ ರವೀಂದ್ರ 51, ಮಿಚೆಲ್ 48 ಮತ್ತು ಟಾಮ್ ಲ್ಯಾಥಮ್ 53 ರನ್ ಬಾರಿಸಿದ್ದಾರೆ. ನೆದರ್ಲ್ಯಾಂಡ್ ಪರ ಬೌಲಿಂಗ್ ನಲ್ಲಿ ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ ತಲಾ 2 ವಿಕೆಟ್ ಪಡೆದಿದ್ದಾರೆ.

ನೆದರ್ಲ್ಯಾಂಡ್ ಪರ ಕಾಲಿನ್ ಅಕರ್ಮನ್ 69, ಸ್ಕಾಟ್ ಎಡ್ವರ್ಡ್ಸ್ 30, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 29 ರನ್ ಬಾರಿಸಿದ್ದಾರೆ. ನ್ಯೂಜಿಲ್ಯಾಂಡ್ ಪರ ಮಿಚೆಲ್ ಸ್ಯಾಂಟ್ನರ್ 5, ಮ್ಯಾಟ್ ಹೆನ್ರಿ 3 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!