ಪರಸ್ಪರ ಕಾದಾಟಕ್ಕಿಳಿದಿರುವ ಅಭಿಮಾನಿಗಳು 
ಕ್ರಿಕೆಟ್

ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ಮೈದಾನದಲ್ಲೇ ಕೈ-ಕೈ ಮಿಲಾಯಿಸಿದ ಫ್ಯಾನ್ಸ್

ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ನವದೆಹಲಿ: ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ಹೌದು.. ಏಕದಿನ ವಿಶ್ವಕಪ್‌ ಟೂರ್ನಿಯ (ICC World Cup 2023) ಭಾರತ ಹಾಗೂ ಅಫಘಾನಿಸ್ತಾನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿದೆ.

ಹಾಗೆಯೇ, ವಿರಾಟ್‌ ಕೊಹ್ಲಿ (Virat Kohli) ಅಫಘಾನಿಸ್ತಾನದ ನವೀನ್‌ ಉಲ್‌ ಹಕ್‌ ಅವರು ಸಿಟ್ಟು, ಸೆಡವು ಮರೆತು ಒಂದಾಗಿದ್ದಾರೆ. ಆದರೆ, ಮೈದಾನದಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಭಾರತದ ಕ್ರಿಕೆಟ್‌ ಅಭಿಮಾನಿಗಳು (Indian Cricket Fans) ಮಾತ್ರ ಹೊಡೆದಾಡಿಕೊಂಡಿದ್ದಾರೆ.

ಭಾರತ-ಅಫಘಾನಿಸ್ತಾನ ಪಂದ್ಯದ ವೇಳೆ ಭಾರತದ ಕ್ರಿಕೆಟ್‌ ಅಭಿಮಾನಿಗಳ ಮಧ್ಯೆಯೇ ಜಗಳ ನಡೆದಿದೆ. ಕೆಲವರು ಭಾರತ ಕ್ರಿಕೆಟ್‌ ತಂಡದ ಜೆರ್ಸಿ ತೊಟ್ಟಿದ್ದು, ಇನ್ನೂ ಕೆಲವರು ಸಾಮಾನ್ಯ ಉಡುಪಿನಲ್ಲಿದ್ದಾರೆ. ಎರಡು ಗುಂಪುಗಳ ಮಧ್ಯೆ ಮೊದಲು ವಾಗ್ವಾದ ಆರಂಭವಾಗಿದೆ. ಇದಾದ ಬಳಿಕ ಕೈ ಕೈ ಮಿಲಾಯಿಸಿಕೊಳ್ಳುವಷ್ಟರ ಮಟ್ಟಿಗೆ ಜಗಳ ತಾರಕಕ್ಕೇರಿದೆ.

ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರಿಂದ ಟೀಕೆಗಳು ವ್ಯಕ್ತವಾಗಿವೆ. ಮೈದಾನದಲ್ಲಿ ಪ್ರತಿಸ್ಪರ್ಧಿ ಆಟಗಾರರೊಂದಿಗೇ ಭಾರತದ ಆಟಗಾರರು ಸೌಹಾರ್ದತಯುತವಾಗಿ ಇರುವಾಗ, ನಾವೇ ಹೀಗೆ ಕಿತ್ತಾಡಿಕೊಂಡರೆ ಹೇಗೆ ಎಂದು ಕಿಡಿಕಾರಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT