ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ಗೆಲುವು
Srinivasa Murthy VN
Updated On : 13 Oct 2023, 11:28 pm

ಚೆನ್ನೈ: ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್‌ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಗ್ರೀನ್ ಸಿಗ್ನಲ್; 128 ವರ್ಷಗಳ ಬಳಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್!

Advertisement

Advertisement

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್‌ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 42.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು. 

ನ್ಯೂಜಿಲೆಂಡ್‌ ಪರ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 78 ಹಾಗೂ ಮಿಚೆಲ್‌ 89 ರನ್‌ಗಳಿಸಿದರು.

ಇದನ್ನೂ ಓದಿ: ಪರಸ್ಪರ ಹಸ್ತಲಾಘವ, ಅಪ್ಪುಗೆ: ಐಪಿಎಲ್ ಗಲಾಟೆ ಮರೆತು ಒಂದಾದ ಕೊಹ್ಲಿ- ನವೀನ್ ಉಲ್ ಹಕ್!

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.

Most wins against a team without any loss in WC
8 - Pakistan vs Sri Lanka
7 - India vs Pakistan
6 - West Indies vs Zimbabwe
6 - New Zealand vs Bangladesh*

 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement