ಟೀಂ ಇಂಡಿಯಾ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಭಾರತೀಯ ಬೌಲರ್‌ಗಳ ಮಾರಕ ದಾಳಿ; ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್‌ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ.

ಅಹಮದಾಬಾದ್: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್‌ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಪಾಕಿಸ್ತಾನ 42.5 ಓವರ್‌ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

ಭಾರತದ ಪರ ರೋಹಿತ್ ಶರ್ಮಾ 86, ಶುಭ್ಮನ್ ಗಿಲ್ 16, ವಿರಾಟ್ ಕೊಹ್ಲಿ 16 ರನ್ ಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ ಅಜೇಯ 53 ಮತ್ತು ಕೆಎಲ್ ರಾಹುಲ್ ಅಜೇಯ 19 ರನ್ ಪೇರಿಸಿದ್ದಾರೆ.

ಪಾಕ್ ಪರ ನಾಯಕ ಬಾಬರ್ ಅಜಮ್ ಅರ್ಧಶತಕ ಗಳಿಸಿದ್ದು ಮೊಹಮ್ಮದ್ ರಿಜ್ವಾನ್ 49 ರನ್ ಗಳಿಗೆ ಔಟ್ ಆದರು. ಬಾಬರ್ ಮತ್ತು ರಿಜ್ವಾನ್ ಔಟಾದ ನಂತರ, ತಂಡವು ಸರ್ವಪತನದತ್ತ ಸಾಗಿತು. ಇಫ್ತಿಕರ್ ಅಹ್ಮದ್ 4 ರನ್ ಗಳಿಸಿ ಔಟಾದರು. ಶಾದಾಬ್ ಖಾನ್ 2 ರನ್ ಗಳಿಸಿದರೆ ಮೊಹಮ್ಮದ್ ರಿಜ್ವಾನ್ 4 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹಸನ್ ಅಲಿ 12 ರನ್ ಗಳಿಸಿ ಔಟಾದರೆ, ಶಾಹೀನ್ ಅಫ್ರಿದಿ 2 ರನ್ ಗಳಿಸಿ ಅಜೇಯರಾಗಿ ಉಳಿದರು.

ಅಹಮದಾಬಾದ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ 10 ಓವರ್ ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ರವೀಂದ್ರ ಜಡೇಜಾ 9.5 ಓವರ್ ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. 

ಇನ್ನು ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಇದು 8ನೇ ಜಯವಾಗಿದೆ. ಇದಕ್ಕೂ ಮುನ್ನ ಭಾರತ 1992, 1996, 1999, 2003, 2011, 2015, 2019ರಲ್ಲಿ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಜಯ ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT