ಊರ್ವಶಿ ರೌಟೇಲಾ 
ಕ್ರಿಕೆಟ್

ಭಾರತ-ಪಾಕ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ 24 ಕ್ಯಾರೆಟ್ ಚಿನ್ನದ ಐಫೋನ್ ಕಳೆದಕೊಂಡ ನಟಿ ಊರ್ವಶಿ ರೌಟೇಲಾ!

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಆಗಮಿಸಿದ್ದರು. ಈ ವೇಳೆ ತಮ್ಮ ಐಫೋನ್ ಕಳೆದುಹೋಗಿದೆ ಎಂದು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಆಗಮಿಸಿದ್ದರು. ಈ ವೇಳೆ ತಮ್ಮ ಐಫೋನ್ ಕಳೆದುಹೋಗಿದೆ ಎಂದು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಊರ್ವಶಿ ರೌಟೇಲಾ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆನಂದಿಸಲು ನರೇಂದ್ರ ಮೋದಿ ಸ್ಟೇಡಿಯಂ ತಲುಪಿದ್ದರು. ಆಗ ಸ್ಟೇಡಿಯಂನಲ್ಲಿ ನಟಿಯ 24 ಕ್ಯಾರೆಟ್ ಚಿನ್ನದ ಐಫೋನ್ ಕಳೆದುಹೋಗಿದೆ. ಈ ಬಗ್ಗೆ ಊರ್ವಶಿ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ಪೋಸ್ಟ್ ನಲ್ಲಿ ಅವರು ಅಹಮದಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ, ನನ್ನ 24 ಕ್ಯಾರೆಟ್ ಐಫೋನ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಳೆದುಹೋಗಿದೆ. ಯಾರಿಗಾದರು ಸಿಕ್ಕರೆ ದಯವಿಟ್ಟು ತಕ್ಷಣ ಸಂಪರ್ಕಿಸಿ ಎಂದು ಇನ್ಸ್ಟಾಗ್ರಾಮ್ ಸ್ಟೋರಿಸ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಊರ್ವಶಿ ರೌಟೇಲಾ ತಮ್ಮ ಮೊಬೈಲ್ ನಲ್ಲಿ ಸ್ಟೇಡಿಯಂನಲ್ಲಿರುವ ತಮ್ಮ ವಿಡಿಯೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಾರತವು ಗೆಲುವಿನತ್ತ ಸಾಗುತ್ತಿರುವುದನ್ನು ಕಂಡು ಖುಷಿ ವ್ಯಕ್ತಪಡಿಸಿದ್ದರು. ಟೀಂ ಇಂಡಿಯಾವನ್ನು ಬೆಂಬಲಿಸಲು ನಟಿ ನೀಲಿ ಬಣ್ಣದ ಡ್ರೆಸ್ ಧರಿಸಿ ಸ್ಟೇಡಿಯಂಗೆ ಬಂದಿದ್ದರು. ನಟಿಯ ಈ ಫೋಟೋವನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದರು. ಈ ಹಿಂದೆಯೂ ಊರ್ವಶಿ ಹಲವು ಬಾರಿ ಕ್ರೀಡಾಂಗಣಕ್ಕೆ ಬಂದು ಪಂದ್ಯವನ್ನು ವೀಕ್ಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್‌

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ