ಆಸ್ಟ್ರೇಲಿಯಾ ತಂಡ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಶ್ರೀಲಂಕಾವನ್ನು ಮಣಿಸಿ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದ ಆಸ್ಟ್ರೇಲಿಯಾ!

2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 5 ವಿಕೆಟ್ ಗಳಿಂದ ಮಣಿಸುವ ಮೂಲಕ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ಲಖನೌ: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 5 ವಿಕೆಟ್ ಗಳಿಂದ ಮಣಿಸುವ ಮೂಲಕ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದೆ. 

ಲಖನೌನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ಭರ್ಜರಿ ಓಪನಿಂಗ್ ಪಡೆದರು 209 ರನ್ ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಆರಂಭಿಕರಾದ ನಿಸಾಂಕ 61 ಮತ್ತು ಕುಸಾಲ್ ಪೆರೆರಾ 78 ರನ್ ಗಳ ಸಿಡಿಸಿ ತಂಡಕ್ಕೆ ಅದ್ಭುತ ಅಡಿಪಾಯ ಹಾಕಿಕೊಟ್ಟರು. ಆದರೆ ನಂತರ ಯಾವು ಆಟಗಾರನು ಹೆಚ್ಚು ಕಾಲ ಕ್ರೀಸ್ ನಲ್ಲಿ ಉಳಿಯಲಿಲ್ಲ. 

ಹೀಗಾಗಿ ಶ್ರೀಲಂಕಾ 43.3 ಓವರ್ ನಲ್ಲಿ 209 ರನ್ ಗಳಿಗೆ ಆಲೌಟ್ ಆಯಿತು. ಇನ್ನು ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನು 88 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 215 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಆಸ್ಟ್ರೇಲಿಯಾ ಪಂದ್ಯಾವಳಿಯಲ್ಲಿ ಮೊದಲೆರೆಡು ಪಂದ್ಯಗಳಲ್ಲಿ ಸೋಲು ಕಂಡಿತ್ತು. 

ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 52, ಡೇವಿಡ್ ವಾರ್ನರ್ 11, ಮಾರ್ನಸ್ ಲ್ಯಾಬುಸ್ಚಾಗ್ನೆ 40, ಜೋಶ್ ಇಂಗ್ಲಿಸ್ 58 ಹಾಗೂ ಗ್ಲೇನ್ ಮ್ಯಾಕ್ಸ್ ವೇಲ್ ಅಜೇಯ 31 ರನ್ ಬಾರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

'Lack Of Knowledge': ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

SCROLL FOR NEXT