ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಐಸಿಸಿ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹೊರಕ್ಕೆ!

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. 

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. 

ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ ನೀಡಲಾಗಿದ್ದು, ನ್ಯೂಜಿಲೆಂಡ್  ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ. ಆದರೆ ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿಸಿದೆ. 

ಆಲ್‌ರೌಂಡರ್‌ಗೆ  ಸ್ಕ್ಯಾನ್‌ ಮಾಡಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ. ಅವರು ಬಿಸಿಸಿಐ ವೈದ್ಯಕೀಯ ತಂಡದ ನಿರಂತರ ನಿಗಾವಣೆಯಲ್ಲಿದ್ದು, ತಂಡದೊಂದಿಗೆ ಧರ್ಮಶಾಲಾಗೆ ತೆರಳುತ್ತಿಲ್ಲ. ಇಂಗ್ಲೆಂಡ್ ವಿರುದ್ಧ ಲಕ್ನೋದಲ್ಲಿ ನಡೆಯಲಿರುವ ತಂಡವನ್ನು ನೇರವಾಗಿ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಪಾಂಡ್ಯ ಆಗಮಿಸುತ್ತಿದ್ದು, ಇಂಗ್ಲೆಂಡ್‌ನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT