ಡರಿಲ್ ಮಿಚೆಲ್ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್ 2023: ಭಾರತ ವಿರುದ್ಧ ಡರಿಲ್ ಮಿಚೆಲ್ ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣ

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ನ್ಯೂಜಿಲೆಂಡ್ ತಂಡದ ಡರಿಲ್ ಮಿಚೆಲ್ ಸ್ಫೋಟಕ ಶತಕ ಸಿಡಿಸಿ ದಾಖಲೆಗೆ ಪಾತ್ರರಾಗಿದ್ದಾರೆ.

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ನ್ಯೂಜಿಲೆಂಡ್ ತಂಡದ ಡರಿಲ್ ಮಿಚೆಲ್ ಸ್ಫೋಟಕ ಶತಕ ಸಿಡಿಸಿ ದಾಖಲೆಗೆ ಪಾತ್ರರಾಗಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಆಟ ಪ್ರದರ್ಶಿಸಿದ ಡರಿಲ್ ಮಿಚೆಲ್ 127 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 9 ಬೌಂಡರಿ ಸಹಿತ 130 ರನ್ ಗಳನ್ನು ಸಿಡಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಭಾರತದ ವಿರುದ್ಧ ಗರಿಷ್ಠ ರನ್ ದಾಖಲಿಸಿದ ನ್ಯೂಜಿಲೆಂಡ್ ನ 4ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 

ಇದಕ್ಕೂ ಮೊದಲು 2022ರಲ್ಲಿ ಆಕ್ಲೆಂಡ್ ನಲ್ಲಿ ನಡೆದ ಪಂದ್ಯದಲ್ಲಿ ಟಾಮ್ ಲಾಥಮ್ ಅಜೇಯ 145ರನ್ ಸಿಡಿಸಿದ್ದರು. ಇದು ಭಾರತದ ವಿರುದ್ಧ ದಾಖಲಾದ ನ್ಯೂಜಿಲೆಂಡ್ ಬ್ಯಾಟರ್ ನ ಗರಿಷ್ಠ ಮೊತ್ತವಾಗಿದೆ. ಬಳಿಕ 2023ರಲ್ಲಿ ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೈಕೆಲ್ ಬ್ರೇಸ್ ವೆಲ್ 140ರನ್ ಸಿಡಿಸಿದ್ದರು. 2023ರಲ್ಲಿ ಇಂದೋರ್ ನಲ್ಲಿ ನಡೆದ ಪಂದ್ಯದಲ್ಲಿ ಡೆವಾನ್ ಕಾನ್ವೆ 138 ರನ್ ಗಳಿಸಿದ್ದರು. ಇದೀಗ ಡರಿಲ್ ಮಿಚೆಲ್ ಇಂದು ಗಳಿಸಿದ 130ರನ್ ಅವರನ್ನು ಈ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿಸಿದೆ.

Highest individual scores for New Zealand vs India in ODIs
145* - Tom Latham, Auckland, 2022
140 - Michael Bracewell, Hyderabad, 2023
138 - Devon Conway, Indore, 2023
130 - Daryl Mitchell, Dharamsala, 2023
120 - Nathan Astle, Rajkot, 1999

 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT