ಆಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾ ಆಲೌಟ್ 
ಕ್ರಿಕೆಟ್

ICC Cricket World Cup 2023: ಆಫ್ಘಾನಿಸ್ತಾನದ ವಿರುದ್ಧ 241 ರನ್ ಗಳಿಗೆ ಶ್ರೀಲಂಕಾ ಆಲೌಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನದ ವಿರುದ್ಧ ಶ್ರೀಲಂಕಾ ತಂಡ 241 ರನ್ ಗಳಿಗೆ ಆಲೌಟ್ ಆಗಿದ್ದು, ಶಾಹಿದಿ ಪಡೆಗೆ ಗೆಲ್ಲಲು 242 ರನ್ ಗಳ ಸಾಧಾರಣ ಗುರಿ ನೀಡಿದೆ.

ಪುಣೆ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿ (ICC Cricket World Cup 2023)ಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ (Afghanistan)ದ ವಿರುದ್ಧ ಶ್ರೀಲಂಕಾ (Sri Lanka) ತಂಡ 241 ರನ್ ಗಳಿಗೆ ಆಲೌಟ್ ಆಗಿದ್ದು, ಶಾಹಿದಿ ಪಡೆಗೆ ಗೆಲ್ಲಲು 242 ರನ್ ಗಳ ಸಾಧಾರಣ ಗುರಿ ನೀಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ (Maharashtra Cricket Association Stadium) ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ (Afghanistan) ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ (Sri Lanka) ತಂಡ ಆಫ್ಘಾನಿಸ್ತಾನದ ಫಜಲ್ಹಕ್ ಫಾರೂಕಿ ಮತ್ತು ಮುಜೀಬ್ ಉರ್ ರೆಹಮಾನ್ ಬೌಲಿಂಗ್ ದಾಳಿ ಅಕ್ಷರಶಃ ನಲುಗಿ ಹೋಯಿತು.

ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಶ್ರೀಲಂಕಾ ತಂಡ 49.3 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 241ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಶ್ರೀಲಂಕಾ ಪರ ಪಥುಂ ನಿಸ್ಸಾಂಕ 46 ರನ್ ಗಳಿಸಿದರೆ, ನಾಯಕ ಕುಶಾಲ್ ಮೆಂಡಿಸ್ 39ರನ್, ಸದೀರ ಸಮರವಿಕ್ರಮ 36ರನ್ ಮತ್ತು ಮಹೀಶ್ ತೀಕ್ಷಣ 29 ರನ್ ಗಳಿಸಿದರು. ಆಫ್ಘಾನಿಸ್ತಾನ ಪರ ಫಜಲ್ಹಕ್ ಫಾರೂಕಿ 4 ವಿಕೆಟ್ ಕಬಳಿಸಿದರೆ, ಮುಜೀಬ್ ಉರ್ ರೆಹಮಾನ್ 2, ಅಜ್ಮತುಲ್ಲಾ ಮತ್ತು ರಷೀದ್ ಖಾನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ