ಸಂಗ್ರಹ ಚಿತ್ರ 
ಕ್ರಿಕೆಟ್

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ದಂಪತಿಗೆ ಗಂಡು ಮಗು ಜನನ

ಭಾರತ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಗಂಡು ಮಗುವಿಗೆ ತಂದೆಯಾಗಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಗಂಡು ಮಗುವಿಗೆ ತಂದೆಯಾಗಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಮ್ಮ ಪುಟ್ಟ ಕುಟುಂಬವು ಬೆಳೆದಿದೆ ಮತ್ತು ನಮ್ಮ ಹೃದಯಗಳು ನಾವು ಊಹಿಸಿರುವುದಕ್ಕಿಂತ ಹೆಚ್ಚು ತುಂಬಿವೆ. ಇಂದು (ಸೋಮವಾರ) ಬೆಳಿಗ್ಗೆ ನಾವು ನಮ್ಮ ಪುಟ್ಟ ಗಂಡುಮಗು 'ಅಂಗದ್ ಜಸ್ಪ್ರೀತ್ ಬುಮ್ರಾ' ಅವರನ್ನು ಜಗತ್ತಿಗೆ ಸ್ವಾಗತಿಸಿದ್ದೇವೆ. ನಮ್ಮ ಜೀವನದಲ್ಲಿ ಹೊಸ ಅಧ್ಯಾಯ ತಂದಿರುವ ಅತಿಥಿಯ ಜೊತೆ ಮುಂದಿನ ದಿನಗಳನ್ನು ಕಳೆಯಲು ನಾನು ಕಾತುರನಾಗಿದ್ದೇನೆ. ಹೊಸ ಅತಿಥಿಯ ಆಗಮನ ನಮಗೆ ತುಂಬಾ ಸಂತೋಷವನ್ನುಂಟು ಮಾಡಿದೆ ಎಂದು ಬುಮ್ರಾ ಹೇಳಿದ್ದಾರೆ.

ಸದ್ಯ ಬುಮ್ರಾ ಅವರು ಪತ್ನಿ ಮತ್ತು ಮಗುವಿನ ಜೊತೆ ಮುಂಬೈನಲ್ಲಿದ್ದು, ಇಂದು ನಡೆಯಲಿರುವ ನೇಪಾಳ ವಿರುದ್ಧದ ಪಂದ್ಯಕ್ಕೆ ಗೈರಾಗಲಿದ್ದಾರೆ. ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

2021ರಲ್ಲಿ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಬುಮ್ರಾ ಮದುವೆಯಾಗಿದ್ದರು. ಈ ಮದುವೆಗೆ ಕುಟುಂಬಸ್ಥರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

2021ರಲ್ಲಿ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಬುಮ್ರಾ ಮದುವೆಯಾಗಿದ್ದರು. ಈ ಮದುವೆಗೆ ಕುಟುಂಬಸ್ಥರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

 ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಸಿಸಿಐ, ಬುಮ್ರಾ ಅವರಿಗೆ ಯಾವುದೇ ಗಾಯಗಳಾಗಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬೈಗೆ ತೆರಳಿದ್ದಾರೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ