ಪಳ್ಳೆಕೆಲೆ: ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನೇಪಾಳದ ವಿರುದ್ದ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಟೂರ್ನಿಯಲ್ಲಿ ಭಾರತ ತಂಡದ ಮೊದಲ ಪಂದ್ಯ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯವಾಗಿತ್ತು. ಆದರೆ ಈ ಪಂದ್ಯ ಮಳೆಗಾಹುತಿಯಾಗಿತ್ತು. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಇದೀಗ ಇಂದಿನ ಪಂದ್ಯವನ್ನು ಭಾರತ ತಂಡ ಗೆಲ್ಲಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಒಂದು ವೇಳೆ ಈ ಪಂದ್ಯ ಕೂಡ ಮಳೆಯಿಂದ ರದ್ದಾದರೆ ಆಗ ಭಾರತದ ಮುಂದಿನ ಹಾದಿ ಕಷ್ಟಕರವಾಗಲಿದೆ.
ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜಸ್ ಪ್ರೀತ್ ಬುಮ್ರಾ ಬದಲಿಗೆ ಮಹಮದ್ ಶಮೀ ಕಣಕ್ಕಿಳಿದಿದ್ದಾರೆ.
ತಂಡಗಳು ಇಂತಿವೆ.
ಭಾರತ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಇದನ್ನೂ ಓದಿ: ನಿಮ್ಮ ಸ್ನೇಹ ಮೈದಾನದಿಂದ ಹೊರಗಿರಲಿ: ಪಾಕ್ ಆಟಗಾರರ ಜೊತೆ ಸೌಹಾರ್ದಯುತವಾಗಿ ವರ್ತಿಸಿದ್ದಕ್ಕೆ ಗಂಭೀರ್ ಕಿಡಿ!
ನೇಪಾಳ
ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಭೀಮ್ ಶರ್ಕಿ, ಸೋಂಪಾಲ್ ಕಾಮಿ, ಗುಲ್ಸನ್ ಝಾ, ದೀಪೇಂದ್ರ ಸಿಂಗ್ ಐರಿ, ಕುಶಾಲ್ ಮಲ್ಲಾ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಲಲಿತ್ ರಾಜಬನ್ಶಿ