ಕ್ರಿಕೆಟ್

ಐಸಿಸಿ ಏಕದಿನ ರ‍್ಯಾಂಕಿಂಗ್: 3ನೇ ಸ್ಥಾನಕ್ಕೆ ಏರಿದ ಶುಭಮನ್ ಗಿಲ್

Lingaraj Badiger

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನಕ್ಕೆ ಏರಿದ್ದಾರೆ.

ಏಷ್ಯಾ ಕಪ್ 2023 ರಲ್ಲಿ ಉತ್ತಮ ಪ್ರದರ್ಶನ ತೋರಿದ ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರು ICC ODI ಶ್ರೇಯಾಂಕದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಶುಭಮನ್ ಗಿಲ್ ಅವರು 750 ರೇಟಿಂಗ್ ಅಂಕಗಳೊಂದಿಗೆ ODI ಬ್ಯಾಟರ್ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದು, ಇದು ಅವರ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿದೆ.

ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಅವರು 882 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ದುಸ್ಸಾನ್ ಅವರು 777 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಪಾಕಿಸ್ತಾನದ ವಿರುದ್ಧ ಪಲ್ಲೆಕೆಲೆಯಲ್ಲಿ ನಡೆದ ಪಂದ್ಯದಲ್ಲಿ 82 ರನ್ ಗಳಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಅವರು 624 ರೇಟಿಂಗ್ ಪಾಯಿಂಟ್‌ಗಳೊಂದಿಗೆ 12 ಸ್ಥಾನಗಳ ಬಡ್ತಿ ಪಡೆದು 24ನೇ ಸ್ಥಾನಕ್ಕೆ ಏರಿದ್ದಾರೆ.

ಐಸಿಸಿ ಬೌಲರ್​ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 8ನೇ ಸ್ಥಾನ ಅಲಂಕರಿಸಿದ್ದಾರೆ.

SCROLL FOR NEXT