ಪ್ರೇಮದಾಸದಲ್ಲಿ ಮುಂದುವರೆದ ಕೊಹ್ಲಿ ಬ್ಯಾಟಿಂಗ್ ಅಬ್ಬರ 
ಕ್ರಿಕೆಟ್

ಪ್ರೇಮದಾಸದಲ್ಲಿ ಮುಂದುವರೆದ ಕೊಹ್ಲಿ ಬ್ಯಾಟಿಂಗ್ ಅಬ್ಬರ: ಸತತ 4 ಶತಕ, ಅಪರೂಪದ ದಾಖಲೆ ಬರೆದ 2ನೇ ಆಟಗಾರ

ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ತಂಡದ ರನ್ ಮೆಷಿನ್ ವಿರಾಟ್ ಬ್ಯಾಟಿಂಗ್ ಅಬ್ಬರ ಮುಂದುವರೆದಿದ್ದು, ಈ ಕ್ರೀಡಾಂಗಣದಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆಯೊಂದನ್ನು ಕೊಹ್ಲಿ ನಿರ್ಮಿಸಿದ್ದಾರೆ.

ಕೊಲಂಬೋ: ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ತಂಡದ ರನ್ ಮೆಷಿನ್ ವಿರಾಟ್ ಬ್ಯಾಟಿಂಗ್ ಅಬ್ಬರ ಮುಂದುವರೆದಿದ್ದು, ಈ ಕ್ರೀಡಾಂಗಣದಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆಯೊಂದನ್ನು ಕೊಹ್ಲಿ ನಿರ್ಮಿಸಿದ್ದಾರೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಸತತ 4 ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

ಪಾಕಿಸ್ತಾನ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ವಿರಾಟ್ ಕೊಹ್ಲಿ ಕೇವಲ 94 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಬರೊಬ್ಬರಿ ಅಜೆಯೇ 122ರನ್ ಗಳನ್ನು ಪೇರಿಸಿದರು. ಅಂತೆಯೇ ಏಕದಿನ ಕ್ರಿಕೆಟ್ ವೃತ್ತಿ ಜೀವನದ ತಮ್ಮ 47ನೇ ಶತಕವನ್ನೂ ಪೂರೈಸಿಕೊಂಡರು. ಅಲ್ಲದೆ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ 13000 ರನ್ ಪೂರೈಸಿದರು.

ಅಂತೆಯೇ ಕೊಹ್ಲಿ ಇದೇ ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ಸತತ 4 ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದು, ಈ ಮೂಲಕ ಕೊಹ್ಲಿ ಏಕದಿನ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಸತತ ನಾಲ್ಕು ಶತಕ ಸಿಡಿಸಿದ ಜಗತ್ತಿನ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಪ್ರೇಮದಾಸ ಸ್ಟೇಡಿಯಂನಲ್ಲಿ ಕೊಹ್ಲಿ ತಮ್ಮ ಕೊನೆಯ ನಾಲ್ಕು ಪಂದ್ಯಗಳಲ್ಲಿ ತಲಾ ಒಂದು ಶತಕ ಗಳಿಸಿದ್ದಾರೆ. 

ಈ ಹಿಂದೆ 2017ರಲ್ಲಿ ನಡೆದ ಏಕದಿನ ಸರಣಿಯಲ್ಲಿ ಶ್ರೀಲಂಕಾ ವಿರುದ್ಧ ಕೊಹ್ಲಿ ಎರಡು ಶತಕಗಳನ್ನು ಬಾರಿಸಿದ್ದರು. 2012ರಲ್ಲಿ ಮತ್ತದೇ ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಸರಣಿ ಶತಕ ಆರಂಭಗೊಂಡಿತ್ತು. ಇದೀಗ ಏಷ್ಯಾಕಪ್ ನಲ್ಲಿ ಅದೇ ಮೈದಾನದಲ್ಲಿ ಕೊಹ್ಲಿ ಶತಕ ಸಿಡಿಸಿದ್ದು, ಈ ಮೈದಾನದಲ್ಲಿ ಇದು ಅವರ ಸತತ 4 ಶತಕವಾಗಿದೆ. ಆ ಮೂಲಕ ಕೊಹ್ಲಿ ಒಂದೇ ಮೈದಾನದಲ್ಲಿ ಸತತ 4 ಶತಕ ಸಿಡಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ವಿದೇಶದಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೂ ಕೊಹ್ಲಿ ಭಾಜನರಾಗಿದ್ದಾರೆ.

ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದ ಹಶಿಮ್ ಆಮ್ಲಾ ಈ ಸಾಧನೆ ಮಾಡಿದ್ದರು. ಆಮ್ಲಾ ಈ ಹಿಂದೆ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್‌ನಲ್ಲಿ ಸತತ 4 ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಈಗ ಏಷ್ಯಾಕಪ್‌ನಲ್ಲಿ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ ಸಂಗಕ್ಕಾರ ಅವರ ನಾಲ್ಕು ಶತಕಗಳ ದಾಖಲೆಯನ್ನು ಸರಿಗಟ್ಟಿದ್ದು, ಕಾಂಟಿನೆಂಟಲ್ ಈವೆಂಟ್‌ನಲ್ಲಿ ಸನತ್ ಜಯಸೂರ್ಯ (6) ಮಾತ್ರ ಹೆಚ್ಚು ಟನ್‌ಗಳನ್ನು ಹೊಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT