ಜಯ್ ಶಾ ಅವರಿಂದ ಗೋಲ್ಡನ್ ಟಿಕೆಟ್ ಪಡೆದ ರಜನಿಕಾಂತ್ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: 'ಗೋಲ್ಡನ್ ಟಿಕೆಟ್' ಪಡೆದ ಸೂಪರ್ ಸ್ಟಾರ್ ರಜನಿಕಾಂತ್!

ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ.

ಮುಂಬೈ: ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಚೆನ್ನೈನಲ್ಲಿರುವ ರಜನಿ ಅವರ ನಿವಾಸಕ್ಕೆ ತೆರಳಿ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ಈಗಾಗಲೇ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೊಲ್ಕರ್ ಅವರಿಗೆ ಜಯ್ ಶಾ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ಇಬ್ಬರ ಫೋಟೋವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ದಿಗ್ಗಜ ನಟ ಭಾಷೆ ಮತ್ತು ಸಂಸ್ಕೃತಿಯನ್ನು ಮೀರಿ ಲಕ್ಷಾಂತರ ಜನರ ಹೃದಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ ಎಂದು ಅದು ಹೇಳಿದೆ.

ಅಕ್ಟೋಬರ್ 5 ರಂದು ಅಹಮದಾಬಾದ್ ನಲ್ಲಿ ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಲಿದ್ದು,  ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್  ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಗೋಲ್ಡನ್ ಟಿಕೆಟ್‌ಗಳು ಬಿಸಿಸಿಐ ವಿಶ್ವಕಪ್ ಗಾಗಿ ಬಳಸುತ್ತಿರುವ ಪ್ರಚಾರ ತಂತ್ರವಾಗಿದೆ.  ಈ ಗೋಲ್ಡನ್ ಟಿಕೆಟ್ ಪಡೆದ ಸೆಲೆಬ್ರಿಟಿಗಳು ವಿಐಪಿ ಲಾಂಜ್ ನಲ್ಲಿ ಕುಳಿತು ಸಂಪೂರ್ಣವಾಗಿ ಉಚಿತವಾಗಿ ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಬಹುದು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!