ಮಹಮದ್ ಸಿರಾಜ್ 
ಕ್ರಿಕೆಟ್

ಐಸಿಸಿ ರ‍್ಯಾಂಕಿಂಗ್: ಏಷ್ಯಾ ಕಪ್ ನಂತರ ವಿಶ್ವದ ನಂ. 1 ಸ್ಥಾನಕ್ಕೇರಿದ ಮೊಹಮ್ಮದ್ ಸಿರಾಜ್

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್​ ಫೈನಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್​ ಫೈನಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಏಷ್ಯಾಕಪ್​ ಫೈನಲ್​ನಲ್ಲಿ ಶ್ರೀಲಂಕಾ ವಿರುದ್ಧ 7 ಓವರ್​ಗಳಲ್ಲಿ 21 ರನ್​ ನೀಡಿ 6 ವಿಕೆಟ್ ಕಬಳಿಸಿದ್ದ ಮೊಹಮ್ಮದ್ ಸಿರಾಜ್ ಅವರು  694 ಅಂಕಗಳೊಂದಿಗೆ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 8 ಸ್ಥಾನ ಮೇಲೇರಿದ್ದಾರೆ. ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ.

ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರು ಈ ಬಾರಿ ಒಟ್ಟು 678 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

ಕಿವೀಸ್​ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಅಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬ್​ ಉರ್ ರೆಹಮಾನ್ ಅವರು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನು ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಅವರು 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Uttarakhand helicopter crash: ಛಿದ್ರ ಛಿದ್ರವಾಗಿ ಬಿದ್ದ ಹೆಲಿಕಾಪ್ಟರ್, ಸುಟ್ಟುಕರಕಲಾದ ಸ್ಥಿತಿಯಲ್ಲಿ ಐವರು ಕನ್ನಡಿಗರು ಸೇರಿದಂತೆ ಆರು ಮೃತದೇಹಗಳು ಪತ್ತೆ!

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ! ಬೆಂಗಳೂರು ಮೂಲದ ಐವರು ಪ್ರಯಾಣಿಕರು ಸೇರಿದಂತೆ ಆರು ಮಂದಿ ಸಾವು, VIDEO

ನಟಿ Nora Fatehiಗೆ ಮತ್ತೆ ಸಂಕಷ್ಟ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣದಲ್ಲಿ ಪೊಲೀಸ್ ಸಮನ್ಸ್!

ಭಾನುವಾರ ಬೆಂಗಳೂರು - ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ; ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು ಮೆಟ್ರೋ ಕಿರುಕುಳ ಆರೋಪ: ಸೌಪಿಕ ಇನ್‌ಸ್ಟಾಗ್ರಾಂ ಖಾತೆಗೆ ಭರ್ಜರಿ ಫಾಲೋವರ್ಸ್, ₹399ಗೆ Paid Subscription ಆರಂಭ?