ಭಾರತ ತಂಡ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂ ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿತು.

ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ ಕೇವಲ 4 ರನ್ ಗಳಿಸಿದಾಗ  ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಶುಭ್ ಮನ್ ಗಿಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ವಾರ್ನರ್ ಆಕರ್ಷಕ ಅರ್ಧ ಶತಕ ಗಳಿಸಿ ರವೀಂದ್ರ ಜಡೇಜೌ ಬೌಲಿಂಗ್ ನಲ್ಲಿ ಶುಭ್ ಮನ್ ಗಿಲ್ ಗೆ ಕ್ಯಾಚ್ ನೀಡಿದರು. ಸ್ಟಿವನ್ ಸ್ಮಿತ್ 41, ಲಾಬಸ್ ಚೆಂಜ್ 39, ಗ್ರೀನ್ 31, ಜೊಸ್ ಇಂಗ್ಲಿಸ್ 45, ಸ್ಟೊಯ್ನಿಸ್ 29, ಕಮ್ಮಿನ್ಸ್ 21 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಪಡೆದರೆ, ಬುಮ್ರಾ, ಅಶ್ವಿನ್, ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.

ಆಸ್ಟ್ರೇಲಿಯಾ ನೀಡಿದ 277 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ ಪರ ಋತುರಾಜ್ ಗಾಯಕ್ವಾಡ್ 71, ಶುಭ್ ಮನ್ ಗಿಲ್ 74, ಶ್ರೇಯಸ್ ಅಯ್ಯರ್ 3, ನಾಯಕ ಕೆಎಲ್ ರಾಹುಲ್ ಔಟಾಗದೆ ಅಜೇಯ 58, ಇಶಾನ್ ಕಿಶಾನ್ 18, ಸೂರ್ಯಕುಮಾರ್ ಯಾದವ್ 50, ರವೀಂದ್ರ ಜಡೇಜಾ 3 ರನ್ ಗಳಿಸಿದರು. ಇದರೊಂದಿಗೆ ಭಾರತ 48.4 ಓವರ್ ಗಳಲ್ಲಿ ಐದು ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!