ಪಾಕ್ ಆಟಗಾರರು 
ಕ್ರಿಕೆಟ್

7 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಪಾಕ್ ತಂಡ: ಶಾಲು ಹಾಕಿ ಸ್ವಾಗತ, ವಿಡಿಯೋ!

ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡ ನಿನ್ನೆ ಭಾರತಕ್ಕೆ ಆಗಮಿಸಿದೆ. ಸುಮಾರು 7 ವರ್ಷಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದ್ದು ಶಾಲು ಹಾಕಿ ಆಟಗಾರರನ್ನು ಸ್ವಾಗತಿಸಲಾಯಿತು.

ಹೈದರಾಬಾದ್: ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡ ನಿನ್ನೆ ಭಾರತಕ್ಕೆ ಆಗಮಿಸಿದೆ. ಸುಮಾರು 7 ವರ್ಷಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದ್ದು ಶಾಲು ಹಾಕಿ ಆಟಗಾರರನ್ನು ಸ್ವಾಗತಿಸಲಾಯಿತು. ಈ ಹಿಂದೆ 2016ರಲ್ಲಿ ಟಿ20 ವಿಶ್ವಕಪ್ ವೇಳೆ ಪಾಕಿಸ್ತಾನ ತಂಡ ಭಾರತಕ್ಕೆ ಬಂದಿತ್ತು. 

ವೀಸಾ ಸಮಸ್ಯೆಯಿಂದಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಭಾರತ ಪ್ರವಾಸ ವಿಳಂಬವಾಗಿದೆ. ಸಮಯಕ್ಕೆ ಸರಿಯಾಗಿ ವೀಸಾ ಸಿಗದ ಕಾರಣ, ತಂಡವು ತನ್ನ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಬೇಕಾಯಿತು. ಅಭ್ಯಾಸ ಪಂದ್ಯಕ್ಕಾಗಿ ಸೆಪ್ಟೆಂಬರ್ 27ರಂದು ಹೈದರಾಬಾದ್ ತಲುಪುವ ಮೊದಲು ಪಾಕಿಸ್ತಾನವು ದುಬೈನಲ್ಲಿ ಎರಡು ದಿನಗಳ 'ಟೀಮ್ ಬಾಂಡಿಂಗ್' ಸೆಷನ್ ಗೆ ಒಳಗಾಗಬೇಕಿತ್ತು. ಆದರೆ ಭಾರತೀಯ ವೀಸಾಗಳ ಅನಿಶ್ಚಿತತೆಯಿಂದಾಗಿ ದುಬೈ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ಪಾಕಿಸ್ತಾನ ಕ್ರಿಕೆಟ್ ತಂಡ 18 ಆಟಗಾರರು ಮತ್ತು 13 ಸಹಾಯಕ ಸಿಬ್ಬಂದಿಯೊಂದಿಗೆ ಭಾರತಕ್ಕೆ ಬಂದಿದೆ. ಪಾಕಿಸ್ತಾನ ತಂಡ ಸೆಪ್ಟೆಂಬರ್ 27ರಂದು ರಾತ್ರಿ 8.15ರ ಸುಮಾರಿಗೆ ಭಾರತವನ್ನು ತಲುಪಿದೆ. ತಂಡದ ಮೊದಲ ಅಭ್ಯಾಸ ಪಂದ್ಯವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಎರಡನೇ ಅಭ್ಯಾಸ ಪಂದ್ಯ ಅಕ್ಟೋಬರ್ 4ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಪಾಕಿಸ್ತಾನ ತಂಡ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 6ರಂದು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ.

ಪಾಕಿಸ್ತಾನ ತಂಡ ಕೊನೆಯದಾಗಿ 2016ರಲ್ಲಿ ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿತ್ತು. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ, ಏಷ್ಯಾ ಕಪ್ ಮತ್ತು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಕ್ರಿಕೆಟ್ ತಂಡಗಳು ಪರಸ್ಪರರ ವಿರುದ್ಧ ಆಡುತ್ತವೆ.

ಪಾಕಿಸ್ತಾನ ತಂಡ: ಬಾಬರ್ ಅಜಮ್(ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಆಗಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT