ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ(ಸಂಗ್ರಹ ಚಿತ್ರ) 
ಕ್ರಿಕೆಟ್

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್-ಅನುಷ್ಕಾ? ಫೋಟೋ ಶೇರ್ ಮಾಡದಂತೆ ಮನವಿ!

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ, ಇಂತಹದ್ದೊಂದು ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. 

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ, ಇಂತಹದ್ದೊಂದು ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. 

ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು, ಇತ್ತೀಚೆಗೆ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಜೊತೆಗೆ ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ. ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಿಲ್ಲ ಎಂದು ಹೇಳಲಾಗುತ್ತಿದೆ. 

ಅನುಷ್ಕಾ ತನ್ನ ಎರಡನೇ ಮಗುವನ್ನು ನಿರೀಕ್ಷಿಯಲ್ಲಿದ್ದಾರೆ. ಕಳೆದ ಬಾರಿಯಂತೆ, ಅವರು ಮುಂದಿನ ದಿನಗಳಲ್ಲಿ ಈ ಸಿಹಿ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಿದ್ದಾರೆ. ಹೀಗಾಗಿಯೇ ಅನುಷ್ಕಾ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಅಥವಾ ಮುಂಬೈನಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅಲ್ಲದೆ ಊಹಾಪೋಹಗಳನ್ನು ತಪ್ಪಿಸುವ ಸಲುವಾಗಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ವರದಿಯಾಗಿದೆ.

ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಸ್ಟಾರ್ ಜೋಡಿ: ಇತ್ತೀಚೆಗೆ ಅನುಷ್ಕಾ ಮತ್ತು ವಿರಾಟ್ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ಈ ವೇಳೆ ಫೋಟೋಗ್ರಾಫರ್ ಗಳ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಅವರ ಫೋಟೋಗಳನ್ನು ತೆಗೆದಾಗ ಅದನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 

2021 ರಲ್ಲಿ ಹೆಣ್ಣು ಮಗು ಜನನ: ಡಿಸೆಂಬರ್ 11, 2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ವಮಿಕಾ ಎಂದು ಹೆಸರಿಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT