ಬಿಸಿಸಿಐ - ಐಪಿಎಲ್ 2024 ಟ್ರೋಫಿ 
ಕ್ರಿಕೆಟ್

IPL 2024: ಕೆಕೆಆರ್ vs ಆರ್‌ಆರ್, ಜಿಟಿ vs ಡಿಸಿ ಪಂದ್ಯಗಳ ದಿನಾಂಕ ಬದಲು

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) vs ರಾಜಸ್ಥಾನ ರಾಯಲ್ಸ್ (ಆರ್‌ಆರ್) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) vs ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಎರಡು ಐಪಿಎಲ್ ಪಂದ್ಯಗಳ ದಿನಾಂಕವನ್ನು ಬದಲಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ.

ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) vs ರಾಜಸ್ಥಾನ ರಾಯಲ್ಸ್ (ಆರ್‌ಆರ್) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) vs ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಎರಡು ಐಪಿಎಲ್ ಪಂದ್ಯಗಳ ದಿನಾಂಕವನ್ನು ಬದಲಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಏಪ್ರಿಲ್ 16ಕ್ಕೆ ನಿಗದಿಪಡಿಸಲಾಗಿದೆ. ಅದರಂತೆ ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್-ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಏಪ್ರಿಲ್ 16 ರಂದು ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ ಕೆಕೆಆರ್-ಆರ್‌ಆರ್ ನಡುವಿನ ಪಂದ್ಯವನ್ನು ರಾಮ ನವಮಿಯ ಕಾರಣದಿಂದಾಗಿ ಮರು ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಆದರೆ, ಈ ಎರಡು ಪಂದ್ಯಗಳ ದಿನಾಂಕ ಬದಲಾವಣೆಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಏಪ್ರಿಲ್ 17 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯವನ್ನು ಈಗ ಏಪ್ರಿಲ್ 16ಕ್ಕೆ ಮತ್ತು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಏಪ್ರಿಲ್ 16 ರಂದು ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಏಪ್ರಿಲ್ 17ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಲೋಕಸಭೆ ಚುನಾವಣೆ ಈ ಬಾರಿ ಏಳು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಪಶ್ಚಿಮ ಬಂಗಾಳ ಕೂಡ ಮತದಾನಕ್ಕೆ ಸಿದ್ಧವಾಗಿದೆ. ಕೋಲ್ಕತ್ತಾದಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಬುಧವಾರ ನಡೆಯಲಿರುವ ಪಂದ್ಯಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ವಿಶಾಖಪಟ್ಟಣಂನಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT