ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ದಾಖಲೆ, ಈ Record ಬರೆದ ಮೊದಲ ಭಾರತೀಯ!

ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ ಅತ್ಯಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಬೆಂಗಳೂರು: ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ ಅತ್ಯಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2024 ರ (IPL 2024) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ವಿರಾಟ್ ಕೊಹ್ಲಿ (Virat kohli) ತಮ್ಮ 100ನೇ ಟಿ20 ಪಂದ್ಯವನ್ನು ಆಡಿದರು. ಆ ಮೂಲಕ ಒಂದೇ ಸ್ಥಳದಲ್ಲಿ 100 ಟಿ 20 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು 2008 ರಿಂದ ಕೊಹ್ಲಿ ಅವರ ಐಪಿಎಲ್ ತವರು ಮೈದಾನವಾಗಿದೆ. ಐಪಿಎಲ್ ಇತಿಹಾಸದಲ್ಲಿ 2008 ರಿಂದ ಒಂದೇ ಫ್ರಾಂಚೈಸಿಗಾಗಿ ಆಡುತ್ತಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಕೊಹ್ಲಿ ದಾಖಲೆ

ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ 3276 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ಪಂದ್ಯಗಳನ್ನು ಆಡಿದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿದ್ದಾರೆ.

2ನೇ ಸ್ಥಾನದಲ್ಲಿ ರೋಹಿತ್ ಶರ್ಮಾ, 3ನೇ ಸ್ಥಾನ ಧೋನಿಗೆ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ 69 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ. ಎಂಎಸ್ ಧೋನಿ ಮೊದಲ ಐಪಿಎಲ್ ಋತುವಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದರೆ. ಚೆನ್ನೈ ಮೂಲದ ತಂಡವನ್ನು ಎರಡು ವರ್ಷ ಅಮಾನತುಗೊಳಿಸಿದಾಗ ಅವರು ರೈಸಿಂಗ್ ಪುಣೆ ಸೂಪರ್ಜೈಂಟ್ಸ್​ ಪರ ಎರಡು ಋತುಗಳಲ್ಲಿ ಆಡಬೇಕಾಯಿತು.

  • 100 ಪಂದ್ಯ – ವಿರಾಟ್ ಕೊಹ್ಲಿ, ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

  • 80 ಪಂದ್ಯ- ರೋಹಿತ್ ಶರ್ಮಾ, ವಾಂಖೆಡೆ ಸ್ಟೇಡಿಯಂ, ಮುಂಬೈ

  • 69 ಪಂದ್ಯ- ಎಂಎಸ್ ಧೋನಿ, ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT