ಯಶಸ್ವಿ ಜೈಸ್ವಾಲ್, ಫಾಫ್ ಡು ಪ್ಲೆಸಿಸ್ 
ಕ್ರಿಕೆಟ್

ಐಪಿಎಲ್ 2024: ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ

ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಇಂದು ಸಂಜೆ ನಡೆಯುತ್ತಿರುವ ಆರ್ ಸಿಬಿ ವಿರುದ್ಧದ ಐಪಿಎಲ್ 2024 ರ 19 ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರನ್ನೊಳಗೊಂಡ ಆರ್‌ಸಿಬಿ ಅಗ್ರ ಕ್ರಮಾಂಕದ ಬ್ಯಾಟಿಂಗ್ ಪಡೆ ಹೊಂದಿದೆ. ಆದರೆ 203 ರನ್‌ಗಳೊಂದಿಗೆ ಆರೆಂಜ್ ಕ್ಯಾಪ್ ಹೊಂದಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಎರಡು ಅರ್ಧಶತಕಗಳನ್ನು ಗಳಿಸಿದ್ದು ಬಿಟ್ಟರೆ ಅವರಲ್ಲಿ ಯಾರೂ ಕೂಡಾ ಅಬ್ಬರಿಸುತ್ತಿಲ್ಲ.

ಇನ್ನೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಇತ್ತೀಚಿಗೆ ಫಾರ್ಮ್ ಗೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಎಡಗೈ ಓಪನರ್ ಮೂರು ಪಂದ್ಯಗಳಿಂದ ಕೇವಲ 39 ರನ್ ಗಳಿಸಿದ್ದಾರೆ ಮತ್ತು ಜೋಸ್ ಬಟ್ಲರ್ ಅವರದ್ದು ಇದೇ ಕಥೆ. ಮೂರು ಪಂದ್ಯಗಳಿಂದ ಕೇವಲ 35 ರನ್‌ ಗಳಿಸಿದ್ದಾರೆ.

ಆರ್ ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ರಾಜಸ್ಥಾನ ರಾಯಲ್ಸ್ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT