ಸಂಗ್ರಹ ಚಿತ್ರ
ಸಂಗ್ರಹ ಚಿತ್ರ 
ಕ್ರಿಕೆಟ್

RR vs RCB: ಸತತ ಸೋಲಿನ ಕಹಿಯಿಂದ ಹೊರಬರಬೇಕಿದೆ ಆರ್ ಸಿಬಿ; ಈ ಪಂದ್ಯ ಸೋತರೆ ಮುಂದೇನು?

Vishwanath S

ಇಂದಿನ IPL ಪಂದ್ಯವು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ವಿಜಯ ಪಥ ಮುಂದುವರೆಸಿದೆ.

2024ರ ಐಪಿಎಲ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ರಾಜಸ್ಥಾನ ಒಟ್ಟು ಮೂರು ಪಂದ್ಯಗಳನ್ನು ಆಡಿದ್ದು ಮೂರರಲ್ಲಿಯೂ ಜಯ ಸಾಧಿಸಿದೆ. ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತಿದೆ. ನಾಯಕ ಫಾಫ್ ಡುಪ್ಲೆಸಿಸ್ ನಾಯಕತ್ವದಲ್ಲಿ ತಂಡ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಐಪಿಎಲ್ 2024ರ 19ನೇ ಪಂದ್ಯ ಸವಾಯಿ ಮಾನ್ಸಿಂಗ್​ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದೆ.

ಈ ಪಂದ್ಯ ಆರ್​ಸಿಬಿ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಇನ್ನು ಈ ಪಂದ್ಯವನ್ನು ಆರ್ ಸಿಬಿ ಗೆಲ್ಲಲೇಬೇಕಿದೆ. ಇಲ್ಲದಿದ್ದರೆ ಮುಂದಿನ ಪಂದ್ಯಗಳಲ್ಲಿ ಆರ್ ಸಿಬಿ ಪ್ರತಿಯೊಂದು ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕುತ್ತದೆ.

ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರನ್ನೊಳಗೊಂಡ ಆರ್‌ಸಿಬಿ ಅಗ್ರ ಬ್ಯಾಟಿಂಗ್ ಕ್ರಮಾಂಕವನ್ನು ಹೊಂದಿದ್ದು, ಈ ಪಂದ್ಯದಲ್ಲಾದರೂ ಅತ್ಯುತ್ತಮ ಪ್ರದರ್ಶನ ನೀಡುವ ತವಕದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರಣ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

SCROLL FOR NEXT