ಮುಂಬೈ ಇಂಡಿಯನ್ಸ್ 
ಕ್ರಿಕೆಟ್

IPL 2024: ಸತತ ಮೂರು ಪಂದ್ಯಗಳ ಸೋಲಿನ ಬಳಿಕ ಮೊದಲ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್, ಹಾರ್ದಿಕ್ ಖುಷ್!

ಐಪಿಎಲ್ 2024ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ಐಪಿಎಲ್ 2024ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿತ್ತು. ಇದಕ್ಕೆ ಉತ್ತರವಾಗಿ ಡೆಲ್ಲಿ ತಂಡ ಎಂಟು ವಿಕೆಟ್‌ಗೆ 205 ರನ್ ಗಳಿಸಲಷ್ಟೇ ಶಕ್ತವಾಗಿದ್ದು 29 ರನ್ ಗಳಿಂದ ಸೋಲು ಕಂಡಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಕಳಪೆ ಪ್ರದರ್ಶನ ನೀಡಿತ್ತು. ಆದರೆ ಇಂದಿನ ಪಂದ್ಯದಲ್ಲಿ 29 ರನ್ ಗಳಿಂದ ಗೆದ್ದು ಬೀಗಿದೆ.

ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 49, ಇಶಾನ್ ಕಿಶನ್ 42, ಹಾರ್ದಿಕ್ ಪಾಂಡ್ಯ 39, ಟಿಮ್ ಡೇವಿಡ್ ಅಜೇಯ 45 ರನ್ ಹಾಗೂ ರೊಮಾರಿಯೋ ಶೆಫರ್ಡ್ ಅಜೇಯ 39 ರನ್ ಬಾರಿಸಿದ್ದಾರೆ. ಡೆಲ್ಲಿ ಪರ ಅಕ್ಷರ್ ಪಟೇಲ್ ಮತ್ತು ಅನ್ರಿಚ್ ನಾರ್ಟ್ಜೆ ತಲಾ 2 ವಿಕೆಟ್ ಪಡೆದಿದ್ದಾರೆ.

ಡೆಲ್ಲಿ ಪರ ಪೃಥ್ವಿ ಶಾ 66, ಅಭಿಶೇಕ್ ಪೊರೆಲ್ 41, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 71 ರನ್ ಬಾರಿಸಿದ್ದಾರೆ. ಜೆರಾಲ್ಡ್ ಕೋಟ್ಜಿ 4 ವಿಕೆಟ್ ಹಾಗೂ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT