ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: ಐಪಿಎಲ್ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ!

Ramyashree GN

ಜೈಪುರ: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ತಮ್ಮ ಎಂಟನೇ ಶತಕ ಸಿಡಿಸಿದ ಅವರು ಮತ್ತೊಂದು ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಬ್ಯಾಟರ್ ಆಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ. ಐಪಿಎಲ್ 2024ರ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಶತಕ ಗಳಿಸಿದರೆ, ಅದೇ ಪಂದ್ಯದಲ್ಲಿ ಜೋಸ್ ಬಟ್ಲರ್ ಕೂಡ ಶತಕ ಗಳಿಸಿ ಆರ್‌ಆರ್ ತಂಡಕ್ಕೆ ಗೆಲುವು ತಂದುಕೊಟ್ಟರು.

ಶನಿವಾರ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿಯೇ ಕೊಹ್ಲಿ ಈ ಸಾಧನೆ ಮಾಡಿದರು. 7ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಒಂದು ರನ್ ಗಳಿಸಿದ ಕೊಹ್ಲಿ ಐಪಿಎಲ್‌ನಲ್ಲಿ 7,500 ರನ್‌ ಗಳಿಸಿದ ಮೊದಲ ಬ್ಯಾಟರ್ ಎನ್ನುವ ಕೀರ್ತಿಗೆ ಭಾಜನರಾದರು. ಅವರು ತಮ್ಮ 242ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಈಗ 52 ಅರ್ಧ ಶತಕಗಳೊಂದಿಗೆ 37 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 7,500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಆರ್‌ಸಿಬಿ ಪರವಾಗಿ ಪ್ರಮುಖ ರನ್-ಸ್ಕೋರರ್ ಆಗಿರುವ ಕೊಹ್ಲಿ, ತಮ್ಮ ಮೂರನೇ ಅರ್ಧಶತಕವನ್ನು ಪೂರೈಸಿದರು.

ವಿರಾಟ್ ಕೊಹ್ಲಿ ನಂತರ ಶಿಖರ್ ಧವನ್ 6,755 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

SCROLL FOR NEXT