ಗುಜರಾತ್​ ಟೈಟಾನ್ಸ್ ಆಟಗಾರರು 
ಕ್ರಿಕೆಟ್

IPL 2024: ರಾಜಸ್ಥಾನ ವಿರುದ್ಧ ಗುಜರಾತ್ ಗೆ 3 ವಿಕೆಟ್​ಗಳ ರೋಚಕ ಗೆಲುವು

2024ರ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಗುಜರಾತ್​ ಟೈಟಾನ್ಸ್ ತಂಡ ಮೂರು ವಿಕೆಟ್​ಗಳ ರೋಚಕ ಗೆಲುವು ಸಾಧಿಸಿದೆ.

ಜೈಪುರ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಗುಜರಾತ್​ ಟೈಟಾನ್ಸ್ ತಂಡ ಮೂರು ವಿಕೆಟ್​ಗಳ ರೋಚಕ ಗೆಲುವು ಸಾಧಿಸಿದೆ.

ಇಂದು ಜೈಪುರದ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್​ ರಾಯಲ್ಸ್​, ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅವರ ಅದ್ಭುತ ಆಟದಿಂದಾಗಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 196 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 197 ರನ್ ಗಳ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಗುಜರಾತ್​ ತಂಡಕ್ಕೆ ಆರಂಭಿಕ ಆಟಗಾರ ಸಾಯಿ ಸುದರ್ಶನ್(35) ಮತ್ತು ನಾಯಕ ಶುಭಮನ್​ ಗಿಲ್​(72) ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ನಂತರ ಗುಜರಾತ್ ತಂಡ ದಿಟ್ಟ ಬ್ಯಾಟಿಂಗ್​ ಹೋರಾಟ ನಡೆಸಿ ಭರ್ತಿ 20 ಓವರ್​ ಆಡಿ 7 ವಿಕೆಟ್​ ನಷ್ಟಕ್ಕೆ 199 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಕೊನೆಯಲ್ಲಿ ರಾಹುಲ್ ತೆವಾಟಿಯ 11 ಎಸೆತಗಳಲ್ಲಿ 22 ರನ್​​ ಬಾರಿಸಿದರೆ, ರಶೀದ್​ ಖಾನ್​ 11 ಎಸೆತಗಳಲ್ಲಿ ಅಜೇಯ 24 ರನ್​ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇನ್ನು 150ನೇ ಐಪಿಎಲ್​ ಪಂದ್ಯವನ್ನಾಡಿದ ಯಜುವೇಂದ್ರ ಚಹಲ್​ ಅವರು 4 ಓವರ್​ ಬೌಲಿಂಗ್​ನಡೆಸಿ 2 ವಿಕೆಟ್​ ಪಡೆದರು. ಮಧ್ಯ ಪ್ರದೇಶದ ಮೂಲದ ಯುವ ವೇಗಿ ಕುಲ್​ದೀಪ್ ಸೇನ್​​ ಘಾತಕ ಬೌಲಿಂಗ್ ದಾಳಿ ನಡೆಸಿ ಮೂರು ವಿಕೆಟ್​ ಕಬಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT