ಹಾರ್ದಿಕ್ ಪಾಂಡ್ಯ, ಫಾಫ್ ಡು ಪ್ಲೆಸಿಸ್ 
ಕ್ರಿಕೆಟ್

IPL 2024: ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಮುಂಬೈ, ಬೌಲಿಂಗ್ ಆಯ್ಕೆ

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯ 25 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯ 25 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡರು. ನಂತರ ಮಾತನಾಡಿದ ಪಾಂಡ್ಯ, ಹೊಸ ಬಾಲ್ ನೊಂದಿಗೆ ಆರಂಭದಲ್ಲಿಯೇ ಬ್ಯಾಟರ್ ಗಳ ಮೇಲೆ ಒತ್ತಡ ಹೇರಲು ಬಯಸುವುದಾಗಿ ತಿಳಿಸಿದರು.ಇಂದಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಪಿಯೂಸ್ ಚಾವ್ಲಾ ಬದಲಿಗೆ ಶ್ರೇಯಸ್ ಆಟವಾಡುತ್ತಿದ್ದಾರೆ.

ಆರ್ ಸಿಬಿ ನಾಯಕ ಫಾಪ್ ಡು ಪ್ಲೆಸಿಸ್ ಮಾತನಾಡಿ, ಇಂದಿನ ಪಂದ್ಯದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು, ಸಾಧ್ಯವಾದರೆ ಒಂದಿಷ್ಟು ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಕನ್ನಡಿಗ ವೈಶಾಖ್ ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಮುಂಬೈ ತಂಡ ಇಂತಿದೆ: ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ) ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಾಲ್

ಆರ್ ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಮಹಿಪಾಲ್ ಲೊಮ್ರೋರ್, ರೀಸ್ ಟೋಪ್ಲೆ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ