ಹಾರ್ದಿಕ್ ಪಾಂಡ್ಯ-ಕೃನಾಲ್ ಪಾಂಡ್ಯ 
ಕ್ರಿಕೆಟ್

ಮಲ ಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ರೂಪಾಯಿ ವಂಚನೆ: ವೈಭವ್ ಪಾಂಡ್ಯ ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ವಂಚನೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ವಂಚನೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ್ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ್ ಪಾಲುದಾರಿಕೆ ಸಂಸ್ಥೆಯಿಂದ ಸುಮಾರು 4.3 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾಗಿ ಆರೋಪಿಸಲಾಗಿದ್ದು ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.

ಐಪಿಎಲ್ 17ನೇ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಕಷ್ಟಗಳು ಕಡಿಮೆಯೇನೂ ಆಗುತ್ತಿಲ್ಲ. ಅವರ ನಾಯಕತ್ವದಲ್ಲಿ ತಂಡವು ತನ್ನ ಮೊದಲ ಮೂರು ಪಂದ್ಯಗಳಲ್ಲಿ ಸೋತಿದೆ. ಆದರೆ, ತನ್ನ ಕೊನೆಯ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ತಂಡ ಯಶಸ್ವಿಯಾಗಿತ್ತು. ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಿಂದ ಅವರು ಖಂಡಿತವಾಗಿಯೂ ತೊಂದರೆಗೊಳಗಾಗುತ್ತಾರೆ. ಈ ವಂಚನೆಯನ್ನು ಅವರ ಮಲ ಸಹೋದರ ವೈಭವ್ ಪಾಂಡ್ಯ ಮಾಡಿದ್ದಾರೆ. ಹಾರ್ದಿಕ್ ಮತ್ತು ಕೃನಾಲ್ ಪರವಾಗಿ ಮುಂಬೈನ ಆರ್ಥಿಕ ಕಚೇರಿ ವಿಭಾಗದಲ್ಲಿ ದೂರು ದಾಖಲಿಸಲಾಗಿದ್ದು, ನಂತರ ವೈಭವ್ ಅವರನ್ನು ಬಂಧಿಸಲಾಗಿದೆ.

ಈ ವಂಚನೆ ಪ್ರಕರಣವು ಹಣ ದುರ್ಬಳಕೆ ಮತ್ತು ಪಾಲುದಾರಿಕೆಯ ನಿಯಮಗಳ ಉಲ್ಲಂಘನೆಯನ್ನು ಒಳಗೊಂಡಿರುತ್ತದೆ. ಮೂರು ವರ್ಷಗಳ ಹಿಂದೆ ಮೂರು ಜನರು ಕೆಲವು ಷರತ್ತುಗಳೊಂದಿಗೆ ಪಾಲಿಮರ್ ವ್ಯವಹಾರವನ್ನು ಪ್ರಾರಂಭಿಸಿದರು. ಕ್ರಿಕೆಟಿಗ ಸಹೋದರರು ಬಂಡವಾಳದ ಶೇಕಡ 40ರಷ್ಟು ಹೂಡಿಕೆ ಮಾಡಬೇಕಾಗಿತ್ತು. ಆದರೆ ವೈಭವ್ ಶೇಕಡ 20ರಷ್ಟು ಕೊಡುಗೆ ನೀಡಬೇಕಿತ್ತು. ದೈನಂದಿನ ಕಾರ್ಯಾಚರಣೆಗಳನ್ನು ನಿರ್ವಹಿಸಬೇಕಿತ್ತು. ಈ ಷೇರುಗಳ ಪ್ರಕಾರ ಲಾಭವನ್ನು ವಿತರಿಸಬೇಕಾಗಿತ್ತು.

ಆದಾಗ್ಯೂ, ವೈಭವ್ ತನ್ನ ಪಾಲುದಾರರಿಗೆ ತಿಳಿಸದೆ ಅದೇ ವ್ಯವಹಾರದಲ್ಲಿ ಮತ್ತೊಂದು ಸಂಸ್ಥೆಯನ್ನು ಸ್ಥಾಪಿಸಿ ಪಾಲುದಾರಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಇದರ ಪರಿಣಾಮ ವ್ಯಾಪಾರದಲ್ಲಿ 3 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ವೈಭವ್ ತನ್ನ ಲಾಭದ ಪಾಲನ್ನು ಯಾರಿಗೂ ತಿಳಿಸದೆ ಶೇಕಡ 20ರಷ್ಟು ರಿಂದ 33.3ರಷ್ಟು ಕ್ಕೆ ಹೆಚ್ಚಿಸಿಕೊಂಡಿದ್ದು, ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರ ಆರ್ಥಿಕ ಹಿತಾಸಕ್ತಿಗಳ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT