ಗ್ಲೆನ್ ಮ್ಯಾಕ್ಸ್ ವೆಲ್ 
ಕ್ರಿಕೆಟ್

IPL 2024: ಗಾಯವೋ? ಕಳಪೆ ಪ್ರದರ್ಶನವೋ? ಅಂತೂ RCB ತಂಡದಿಂದ ಗ್ಲೇನ್ ಮ್ಯಾಕ್ಸ್‌ವೆಲ್ ಔಟ್?

ಐಪಿಎಲ್ 2024ರ ಮುಂಬೈ ಇಂಡಿಯನ್ಸ್ ವಿರುದ್ಧದ ಹೀನಾಯ ಸೋಲಿನ ನಂತರ RCB ಮತ್ತೊಂದು ದೊಡ್ಡ ಹೊಡೆತವನ್ನು ಅನುಭವಿಸಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಗಾಯಗೊಂಡಿದ್ದು, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದೆ.

ಐಪಿಎಲ್ 2024ರ ಮುಂಬೈ ಇಂಡಿಯನ್ಸ್ ವಿರುದ್ಧದ ಹೀನಾಯ ಸೋಲಿನ ನಂತರ RCB ಮತ್ತೊಂದು ದೊಡ್ಡ ಹೊಡೆತವನ್ನು ಅನುಭವಿಸಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಗಾಯಗೊಂಡಿದ್ದು, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕ್ಯಾಚ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಗ್ಲೇನ್ ಮ್ಯಾಕ್ಸ್‌ವೆಲ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡರು. ನಂತರ ಅವರು ಮೈದಾನದಿಂದ ನಿರ್ಗಮಿಸಿದರು. ಈಗ ಮ್ಯಾಕ್ಸ್‌ವೆಲ್ ಏಪ್ರಿಲ್ 15ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

ಐಪಿಎಲ್ 2024ರಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಬ್ಯಾಟಿಂಗ್ ನಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಗ್ಲೇನ್ ಮ್ಯಾಕ್ಸ್‌ವೆಲ್ ಕಳೆದ ಆರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ಅವರು ಕೆಕೆಆರ್ ವಿರುದ್ಧ 19 ಎಸೆತಗಳಲ್ಲಿ 28 ರನ್ ಗಳಿಸಿದ್ದರು. ಇದನ್ನು ಹೊರತುಪಡಿಸಿ ಉಳಿದ ಐದು ಪಂದ್ಯಗಳಲ್ಲಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ಅವರು ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಲ್ಲದೆ ಅವರ ಬೌಲಿಂಗ್ ಸಹ ಹೆಚ್ಚು ಆಕ್ರಣಕಾರಿಯಾಗಿಲ್ಲ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ಗ್ಲೆನ್ ವಿಫಲವಾಗಿದ್ದಾರೆ.

ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿದ 6 ಪಂದ್ಯಗಳಲ್ಲಿ 1 ಪಂದ್ಯದಲ್ಲಿ ಮಾತ್ರ ಗೆಲ್ಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT