ವರುಣ್ ಚಕ್ರವರ್ತಿಯವರೊಂದಿಗೆ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್
ವರುಣ್ ಚಕ್ರವರ್ತಿಯವರೊಂದಿಗೆ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ 
ಕ್ರಿಕೆಟ್

IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ

Ramyashree GN

ಕೋಲ್ಕತ್ತಾ: ಇಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧದ ಐಪಿಎಲ್ 2024ನೇ ಆವೃತ್ತಿಯ 31ನೇ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸುನಿಲ್ ನರೇನ್ ಅವರ ಅಮೋಘ ಶತಕದ ನೆರವಿನಿಂದ ಕೆಕೆಆರ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತು.

224 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಇನಿಂಗ್ಸ್ ಆರಂಭಿಸಿದ ಜೋಸ್ ಬಟ್ಲರ್ ಏಕಾಂಗಿಯಾಗಿ ಹೋರಾಡಿ 60 ಎಸೆತಗಳಲ್ಲಿ ಅಜೇಯ 107 ರನ್ ಗಳಿಸುವುದರೊಂದಿಗೆ ಕೆಕೆಆರ್ ವಿರುದ್ಧ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು.

'ಇದು ಐಪಿಎಲ್‌ನ ನೀತಿ ಸಂಹಿತೆಯಡಿಯಲ್ಲಿ ಕನಿಷ್ಠ ಓವರ್‌ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಈ ಆವೃತ್ತಿಯಲ್ಲಿ ಕೆಕೆಆರ್ ತಂಡದ ಮೊದಲ ಅಪರಾಧವಾಗಿರುವುದರಿಂದ, ಶ್ರೇಯಸ್ ಐಯ್ಯರ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಏಳು ಪಂದ್ಯಗಳನ್ನು ಆಡಿರುವ ರಾಜಸ್ಥಾನ್ ರಾಯಲ್ಸ್‌ ತಂಡ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಆರು ಪಂದ್ಯಗಳನ್ನು ಆಡಿರುವ ಕೆಕೆಆರ್ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಕ್ರಮವಾಗಿ ಒಂದು ಮತ್ತು ಎರಡನೇ ಸ್ಥಾನದಲ್ಲಿವೆ.

SCROLL FOR NEXT