ಆರ್ ಸಿಬಿ ಆಟಗಾರರು 
ಕ್ರಿಕೆಟ್

IPL 2024: ಗುಜರಾತ್ ವಿರುದ್ಧ RCB ಗೆ 9 ವಿಕೆಟ್ ವೀರೋಚಿತ ಗೆಲುವು!

IPL 2024 ಟೂರ್ನಿಯ 45ನೇ ಪಂದ್ಯದಲ್ಲಿ ಗುಜರಾತ್ ಗೆ ತವರಿನಲ್ಲಿಯೇ ಭಾರಿ ಮುಖಭಂಗವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಅಹಮದಾಬಾದ್: IPL 2024 ಟೂರ್ನಿಯ 45ನೇ ಪಂದ್ಯದಲ್ಲಿ ಗುಜರಾತ್ ಗೆ ತವರಿನಲ್ಲಿಯೇ ಭಾರಿ ಮುಖಭಂಗವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು. ಆರಂಭಿಕ ಆಟಗಾರರಾದ ವೃದ್ಧಿಮನ್ ಶಾ ಕೇವಲ 5 ರನ್ ಗಳಿಗೆ ಔಟಾದರೆ, ನಾಯಕ ಶುಭ್ ಮನ್ ಗಿಲ್ 16 ರನ್ ಗಳಿಸಿ ನಿರ್ಗಮಿಸಿದರು. ನಂತರ ಜೊತೆಯಾದ ಸಾಯಿ ಸುದರ್ಶನ್ ಅಜೇಯ 84 ಮತ್ತು ಮೊಹಮ್ಮದ್ ಶಾರೂಖ್ ಖಾನ್ 58 ರನ್ ಗಳ ಜೊತೆಯಾಟದಿಂದ ರನ್ ಹೆಚ್ಚಾಯಿತು. ನಂತರ ಬಂದ ಡೇವಿಡ್ ಬಂದ ಡೇವಿಡ್ ಮಿಲ್ಲಿರ್ 26 ರನ್ ಗಳಿಸಿದರು.

ರಾಯಲ್ ಚಾಲೆಂಜರ್ಸ್ ಪರ ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಗ್ಲೇನ್ ಮ್ಯಾಕ್ಸ್ ವೆಲ್ ತಲಾ ಒಂದೊಂದು ವಿಕೆಟ್ ಪಡೆದರು. ಗುಜರಾತ್ ಟೈಟನ್ಸ್ ನೀಡಿದ 201 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಅಜೇಯ 70,ಫಾಪ್ ಡು ಪ್ಲೆಸಿಸ್ 24, ವಿಲ್ ಜಾಕ್ಸ್ ಭರ್ಜರಿ ಶತಕ ಸಿಡಿಸಿ ಭರ್ಜರಿ 6 ವಿಕೆಟ್ ಗಳಿಂದ ಆರ್ ಸಿಬಿ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ವಿಲ್ ಜಾಕ್ಸ್ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT