ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ನಿಂದ ನಿಧನ: ಪ್ರಧಾನಿ ಮೋದಿ, ಬಿಸಿಸಿಐ ಸೇರಿ ಹಲವರು ಕಂಬನಿ

ಗಾಯಕ್ವಾಡ್ ಅವರು ತಮಮ್ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ನವದೆಹಲಿ: ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಗಾಯಕ್ವಾಡ್ ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಭಾರತದ ಮಾಜಿ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದ ಗಾಯಕ್ವಾಡ್ ಅವರು ಕಳೆದ ತಿಂಗಳು ದೇಶಕ್ಕೆ ಹಿಂತಿರುಗುವ ಮೊದಲು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ ಬಿಸಿಸಿಐ ಒಂದು ಕೋಟಿ ರೂಪಾಯಿ ಧನಸಹಾಯ ಮಾಡಿತ್ತು. 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ಕೂಡ ಆರ್ಥಿಕ ಸಹಾಯ ಮಾಡಿದ್ದರು.

ಗಾಯಕ್ವಾಡ್ ಅವರು ತಮಮ್ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

1998 ರಲ್ಲಿ ಶಾರ್ಜಾದಲ್ಲಿ ಮತ್ತು ದೆಹಲಿಯ ಫಿರೋಜ್‌ಶಾ ಕೋಟ್ಲಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಅವರು 1999 ರಲ್ಲಿ ಪಾಕಿಸ್ತಾನದ ವಿರುದ್ಧ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದದ್ದು ಅವರ ವೃತ್ತಿಜೀವನದ ಅದ್ಬುತ ಕ್ಷಣಗಳಾಗಿದ್ದವು.

ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕ್ರಿಕೆಟ್‌ಗೆ ನೀಡಿದ ಕೊಡುಗೆಗಾಗಿ ಶ್ರೀ ಅಂಶುಮಾನ್ ಗಾಯಕ್ವಾಡ್ ಅವರನ್ನು ಸ್ಮರಿಸಲಾಗುವುದು. ಅವರು ಪ್ರತಿಭಾನ್ವಿತ ಆಟಗಾರ ಮತ್ತು ಅತ್ಯುತ್ತಮ ತರಬೇತುದಾರರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ದಿವಂಗತ ಕ್ರಿಕೆಟಿಗನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 1974 ಮತ್ತು 1984 ರ ನಡುವೆ, ಅವರು ಭಾರತೀಯ ತಂಡದಲ್ಲಿ ಸುನಿಲ್ ಗವಾಸ್ಕರ್ ಪಾಲುದಾರರಾಗಿ ಎರಡನೇ ಓಪನರ್ ಆಗಿದ್ದರು.

ಅವರು ರಾಷ್ಟ್ರೀಯ ಕ್ರಿಕೆಟ್ ಆಟಗಾರರ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದರು, ಬರೋಡಾ ಕ್ರಿಕೆಟ್ ಅಸೋಸಿಯೇಷನ್‌ನ ಮುಖ್ಯಸ್ಥರಾಗಿದ್ದರು. ಅನಾರೋಗ್ಯಕ್ಕೆ ತುತ್ತಾಗುವ ಮೊದಲು ಅವರು ಭಾರತೀಯ ಕ್ರಿಕೆಟ್ ಅಸೋಸಿಯೇಷನ್ ನ ಪ್ರತಿನಿಧಿಯಾಗಿ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸದಸ್ಯರಾಗಿದ್ದರು.

ಕ್ರಿಕೆಟ್ ದಿಗ್ಗಜರಾದ ಗವಾಸ್ಕರ್, ಕಪಿಲ್ ದೇವ್, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ, ಕ್ಲೈವ್ ಲಾಯ್ಡ್, ಆಂಡಿ ರಾಬರ್ಟ್ಸ್, ಫಾರೋಖ್ ಇಂಜಿನಿಯರ್, ಭಾರತದ ಮಾಜಿ ನಾಯಕ ದಿಲೀಪ್ ವೆಂಗ್‌ಸರ್ಕರ್, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಮೊಹಿಂದರ್ ಅಮರನಾಥ್, ಸಂದೀಪ್ ಪಾಟೀಲ್, ಕರ್ಸನ್ ಘಾವ್ರಿ, ಬಲ್ವಿಂದರ್ ಸಿಂಗ್ ಸಂಧು ಮತ್ತು ನಟ ನಾನಾ ಪಾಟೇಕರ್ ಅವರು ಕೊನೆಯುಸಿರೆಳೆಯುವ ಮೊದಲು ಗಾಯಕ್ವಾಡ್ ಅವರಲ್ಲಿ ಚೇತರಿಕೆ ಕಾಣಲೆಂದು ಪ್ರೋತ್ಸಾಹದಾಯಕ ಮಾತುಗಳಿಂದ ಹುರಿದುಂಬಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT