ರೋಹಿತ್ ಶರ್ಮಾ-ಡ್ಯಾರಿಲ್ ಕುಲ್ಲಿನನ್  
ಕ್ರಿಕೆಟ್

'ಡುಮ್ಮ.. ಅಧಿಕ ತೂಕ..'; Rohit Sharma ವಿರುದ್ಧ ದಕ್ಷಿಣ ಆಫ್ರಿಕಾ ದಿಗ್ಗಜ ಬ್ಯಾಟರ್​ Daryll Cullinan ಟೀಕೆ!

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿರುದ್ಧ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡ್ಯಾರಿಲ್ ಕುಲ್ಲಿನನ್ ಕಟುವಾಗಿ ಟೀಕಿಸಿದ್ದಾರೆ.

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕಳಪೆ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ವಿರುದ್ಧ ಮಾಜಿ ಕ್ರಿಕೆಟಿಗನೋರ್ವ ಹೀನಾಯ ಟೀಕೆ ಮಾಡಿದ್ದು, ಡುಮ್ಮ.. ಅಧಿಕ ತೂಕ.. ದೀರ್ಘಾವಧಿ ಕ್ರಿಕೆಟಿಗನಲ್ಲ ಎಂದು ಟೀಕಿಸಿದ್ದಾರೆ.

ಹೌದು.. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿರುದ್ಧ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡ್ಯಾರಿಲ್ ಕುಲ್ಲಿನನ್ ಕಟುವಾಗಿ ಟೀಕಿಸಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ಕುಲ್ಲಿನನ್, 'ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ದೈಹಿಕ ಸ್ಥಿತಿಯಲ್ಲಿ ಭಾರೀ ವ್ಯತ್ಯಾಸವಿದೆ. ರೋಹಿತ್ ಅಧಿಕ ತೂಕ ಹೊಂದಿದ್ದು ಇವರು ದೀರ್ಘಾವಧಿಯ ಕ್ರಿಕೆಟಿಗನಲ್ಲ. ಅಲ್ಲದೇ ನಾಲ್ಕು ಅಥವಾ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವ ಸ್ಥಿತಿಯಲ್ಲಿ ರೋಹಿತ್ ಶರ್ಮಾ​ ಇಲ್ಲ.

ಇವರು ಫ್ಲಾಟ್ ವಿಕೆಟ್‌ಗಳಲ್ಲಿ ಮಾತ್ರ ಆಡಬಲ್ಲರು. ಬೌನ್ಸ್ ಅನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿಲ್ಲ" ಎಂದು ಇನ್​ಸೈಡ್‌ಸ್ಪೋರ್ಟ್‌ ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

BGTಯಲ್ಲಿ ರೋಹಿತ್ ಶರ್ಮಾ

ಭಾರತ-ಆಸ್ಟ್ರೇಲಿಯಾ ನಡುವೆ ಬಾರ್ಡರ್​​-ಗವಾಸ್ಕರ್​ ಟ್ರೋಫಿ ಟೆಸ್ಟ್‌ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಭಾರತದ ಹಿರಿಯ ಆಟಗಾರರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿವೆ. ಅದರಲ್ಲೂ ರೋಹಿತ್​ ಶರ್ಮಾ ಬ್ಯಾಟಿಂಗ್ ವೈಫಲ್ಯದ ಬಗ್ಗೆ​ ಟೀಕೆಗಳು ಕೇಳಿಬಂದಿದ್ದವು.

ಎರಡನೇ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ಹೇಳಿದ್ದ ರೋಹಿತ್​ ಶರ್ಮಾ, ಸಾಮಾನ್ಯ ಆಟಗಾರನಂತೆ ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದರು. ಎರಡೂ ಇನ್ನಿಂಗ್ಸ್‌ನಲ್ಲಿ ತಂಡ ಸಂಕಷ್ಟದಲ್ಲಿರುವಾಗ ರೋಹಿತ್ ಬ್ಯಾಟಿಂಗ್‌ಗೆ ಬಂದರೂ ಕ್ರೀಸ್​ನಲ್ಲಿ ನಿಂತು ತಂಡಕ್ಕೆ ಆಸರೆಯಾಗಲಿಲ್ಲ. ಎರಡೂ ಇನ್ನಿಂಗ್ಸ್​ನಲ್ಲಿ ಕೇವಲ 3 ಮತ್ತು 6 ರನ್​ಗಳಿಸಿ ಔಟಾಗಿದ್ದರು.

ಬ್ಯಾಟಿಂಗ್​ ಜೊತೆಗೆ ನಾಯಕತ್ವದ ಬಗ್ಗೆಯೂ ಟೀಕೆಗಳು ಬಂದಿದ್ದವು. ರೋಹಿತ್ ಶರ್ಮಾ​ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಬುಮ್ರಾ ನಾಯಕತ್ವ ವಹಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಆದರೆ ಅಡಿಲೇಡ್​ನಲ್ಲಿ ರೋಹಿತ್​ ಜವಾಬ್ದಾರಿ ವಹಿಸಿಕೊಂಡರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಮುಂದಿನ ಪಂದ್ಯಕ್ಕೆ ಬುಮ್ರಾ ನಾಯಕತ್ವ ವಹಿಸಿಕೊಳ್ಳಬೇಕೆಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದರು.

ರೋಹಿತ್ ಶರ್ಮಾ ರ್ಯಾಂಕಿಂಗ್ ಕುಸಿತ

ಟೆಸ್ಟ್‌ನಲ್ಲಿ ಕಳಪೆ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಶತಕ ಬಾರಿಸಿ 10 ತಿಂಗಳು ಕಳೆದಿವೆ. ಕೊನೆಯ 12 ಟೆಸ್ಟ್ ಇನ್ನಿಂಗ್ಸ್‌ನಲ್ಲೂ ರೋಹಿತ್ 11.83 ಸರಾಸರಿಯಲ್ಲಿ ಕೇವಲ 142 ರನ್ ಮಾತ್ರ ಗಳಿಸಿದ್ದಾರೆ. ಅಂತೆಯೇ ICC ಇತ್ತೀಚಿನ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದ್ದು, ಈ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಟಾಪ್ 30ರಲ್ಲೂ ಇಲ್ಲ. ಆರು ಸ್ಥಾನ ಕುಸಿದು 31ನೇ ಸ್ಥಾನ ತಲುಪಿದ್ದಾರೆ. ಆರು ವರ್ಷಗಳ ನಂತರ ಮೊದಲ ಬಾರಿಗೆ ಹಿಟ್‌ಮ್ಯಾನ್ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ 30ರೊಳಗೆ ಸ್ಥಾನ ಪಡೆಯುವಲ್ಲೂ ವಿಫಲರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT