ಮೊದಲ ದಿನದಾಟಕ್ಕೆ ಮಳೆ ಅಡ್ಡಿ 
ಕ್ರಿಕೆಟ್

BGT 2025: ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್ ಮೊದಲ ದಿನದಾಟ ಮಳೆಯಿಂದಾಗಿ ರದ್ದು, Aus 28/0

ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿರುವಂತೆಯೇ ಮಳೆಯಿಂದಾಗಿ ಇಡೀ ದಿನದಾಟ ಸ್ಥಗಿತವಾಗಿದೆ.

ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

ಆಸ್ಟ್ರೇಲಿಯಾ ತಂಡ ಕೇವಲ 28 ರನ್ ಗಳಿಸಿದ್ದಾಗ ಆರಂಭವಾದ ಮಳೆ ಇಡೀ ದಿನ ಸುರಿದಿದ್ದು, ಹೀಗಾಗಿ ಮೊದಲ ದಿನದಾಟವನ್ನು ಅಂಪೈರ್ ಗಳು ಸ್ಥಗಿತಗೊಳಿಸಿದರು.

ಆಸ್ಟ್ರೇಲಿಯಾ 13. 2 ಓವರ್‌ಗಳಲ್ಲಿ 28 ರನ್‌ಗಳಿಸಿದ್ದು, ಖವಾಜ 19ರನ್ ಮತ್ತು ನಥನ್‌ 4 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಭಾರತ ತಂಡದಲ್ಲಿ ಬದಲಾವಣೆ

ಇನ್ನು ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ಅಶ್ವಿನ್‌ ಬದಲಿಗೆ ರವೀಂದ್ರ ಜಡೇಜಾ ಕಣಕ್ಕೆ ಇಳಿದಿದ್ದಾರೆ. ಅಂತೆಯೇ ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಆಸ್ಟ್ರೇಲಿಯಾ ಬೋಲ್ಯಾಂಡ್‌ ಬದಲಿಗೆ ಹ್ಯಾಜಲ್‌ವುಡ್‌ ಅವರಿಗೆ ಅವಕಾಶ ಕಲ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ