ಜಸ್ಪ್ರಿತ್ ಬುಮ್ರಾ online
ಕ್ರಿಕೆಟ್

IND vs AUS 3rd Test: Kapil Dev ದಾಖಲೆ ಮುರಿದ Jasprit Bumrah!

ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ

ಬ್ರಿಸ್ಬೇನ್: ಆಸ್ಟ್ರೇಲಿಯಾ- ಭಾರತ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ Jasprit Bumrah ಐತಿಹಾಸಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ದಾಖಲೆ ಈ ವರೆಗೂ ಭಾರತದ ಕ್ರಿಕೆಟ್ ಲೆಜೆಂಡ್ kapil Dev ಅವರ ಹೆಸರಿನಲ್ಲಿತ್ತು. ಈಗ ಕಪಿಲ್ ದೇವ್ ಸಾಧನೆಯನ್ನು ಸರಿಗಟ್ಟಿ ಬುಮ್ರಾ ವಿಶ್ವದಾಖಲೆ ನಿರ್ಮಿಸಿ ಹೆಮ್ಮೆಯ ಭಾರತೀಯ ಬೌಲರ್ ಎನಿಸಿದ್ದಾರೆ.

ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬ್ರಿಸ್ಬೇನ್ ನಲ್ಲಿ ನಡೆದ 3 ನೇ ಟೆಸ್ಟ್ ಪಂದ್ಯದ 2 ನೇ ಇನ್ನಿಂಗ್ಸ್ ನಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾದ ನೆಲದಲ್ಲಿ ಭಾರತೀಯ ಬೌಲರ್ ಆಗಿ ಬುಮ್ರಾ ಅತಿ ಹೆಚ್ಚು ವಿಕೆಟ್ ಗಳನ್ನು ಪಡೆದಿದ್ದಾರೆ. 10 ಪಂದ್ಯಗಳಲ್ಲಿ ಬುಮ್ರಾ 52 ವಿಕೆಟ್ ಗಳನ್ನು ಕಬಳಿಸಿದ್ದು, 17.25 ಸರಾಸರಿ ಹೊಂದಿದ್ದಾರೆ.

ಆಸ್ಟ್ರೇಲಿಯಾ ನೆಲದಲ್ಲಿ ಕಪಿಲ್ ದೇವ್ 11 ಟೆಸ್ಟ್ ಪಂದ್ಯಗಳಲ್ಲಿ 51 ವಿಕೆಟ್ ಗಳಿಸಿ 24.58 ಸರಾಸರಿ ಹೊಂದಿದ್ದರು. ಬಾರ್ಡರ್-ಗವಾಸ್ಕರ್ ಟ್ರೋಫಿ 2024-25 ರಲ್ಲಿ ಇನ್ನೂ 2 ಟೆಸ್ಟ್ ಗಳಿರುವುದರಿಂದ ಬುಮ್ರಾಗೆ ಇನ್ನಷ್ಟು ಸಂಖ್ಯೆಗಳನ್ನು ಹೆಚ್ಚಿಸಿಕೊಳ್ಳುವ ಅವಕಾಶ ಇದೆ.

ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಗಳ ಪಟ್ಟಿ ಇಂತಿದೆ.

  • ಅನಿಲ್ ಕುಂಬ್ಳೆ 49

  • ರವಿಚಂದ್ರನ್ ಅಶ್ವಿನ್ 40

  • ಬಿಶನ್ ಸಿಂಗ್ ಬೇಡಿ 35 ವಿಕೆಟ್ ಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?