ಕೆಎಲ್ ರಾಹುಲ್ ಗೆ ಗಾಯ (ಸಂಗ್ರಹ ಚಿತ್ರ) 
ಕ್ರಿಕೆಟ್

BGT 2025: ಭಾರತ ತಂಡಕ್ಕೆ ಮತ್ತೊಂದು ಆಘಾತ, KL Rahul ಗೆ ಗಾಯ, Boxing Day Test ಪಂದ್ಯಕ್ಕೆ ಅಲಭ್ಯ? Video

ಆಲ್ರೌಂಡರ್ ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು, ಈ ಆಘಾತದ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯಕ್ಕೆ ಸಿದ್ಧತೆ ನಡೆಸಿರುವ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ.

ಹೌದು.. ಈಗಾಗಲೇ ಸರಣಿ ಮೂರನೇ ಪಂದ್ಯದ ಬಳಿಕ ತಂಡದ ಪ್ರಮುಖ ಆಲ್ರೌಂಡರ್ ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು, ಈ ಆಘಾತದ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸರಣಿಯ 4ನೇ ಹಾಗೂ Boxing Day Test ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿದ್ದ ವೇಳೆ ಕೆಎಲ್ ರಾಹುಲ್ ಕೈಗೆ ಪೆಟ್ಟು ಮಾಡಿಕೊಂಡಿದ್ದು, ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಸರಣಿಯುದ್ದಕ್ಕೂ ಕಾಂಗರೂ ಬೌಲರ್​ಗಳನ್ನು ಕಾಡಿದ್ದ ಕೆಎಲ್ ರಾಹುಲ್ ಅಭ್ಯಾಸದ ವೇಳೆ ಗಾಯಗೊಂಡಿದ್ದು, ರಾಹುಲ್ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಗಾಯಗೊಂಡ ಬೆರಳಿಗೆ ತಂಡದ ಫಿಸಿಯೊ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದೆ.

ಇನ್ನು ರಾಹುಲ್ ಗಾಯದ ಕುರಿತು ತಂಡದ ಅಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಸದ್ಯ ಭಾರತ ತಂಡದ ವೈದ್ಯಕೀಯ ತಂಡ ರಾಹುಲ್ ಗಾಯದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಗಾಯಗ ಗಂಭೀರತೆ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಇಡೀ ಸರಣಿಯಲ್ಲಿ ಟೀಂ ಇಂಡಿಯಾ ಪರ ಕೊಂಚ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರರಲ್ಲಿ ರಾಹುಲ್ ಕೂಡ ಒಬ್ಬರು. ಹೀಗಾಗಿ ರಾಹುಲ್ ಬೇಗ ಚೇತರಿಸಿಕೊಂಡು ನಾಲ್ಕನೇ ಪಂದ್ಯಕ್ಕೆ ಲಭ್ಯರಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಅಂದಹಾಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವು ಪ್ರತಿಷ್ಠಿತ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT