ವೈಭವ್ ಸೂರ್ಯವಂಶಿ 
ಕ್ರಿಕೆಟ್

Vijay Hazare Trophy: ಕ್ರಿಕೆಟ್ ಲೋಕದ ಅಪರೂಪದ ದಾಖಲೆ ಬರೆದ 13 ವರ್ಷದ Vaibhav Suryavanshi

ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್​ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದರು.

ಮುಂಬೈ: ಐಪಿಎಲ್‌ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲೂ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

ಹೌದು.. ನಿನ್ನೆಯಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುವ ಮೂಲಕ ವೈಭವ್ ಸೂರ್ಯವಂಶಿ ಈಗ ಲಿಸ್ಟ್-ಎ ಪಂದ್ಯ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವೈಭವ್ ಸೂರ್ಯವಂಶಿ ಅವರು 13 ವರ್ಷ 269 ದಿನದಲ್ಲಿ ಬಿಹಾರದ ಪರ ತಮ್ಮ ಮೊದಲ ಪಂದ್ಯವನ್ನು ಆಡಿದ್ದು, ಈ ಮೂಲಕ ಅವರು 1999/2000 ದೇಶೀಯ ಸೀಸನ್​ನಲ್ಲಿ 14 ವರ್ಷ ಮತ್ತು 51 ದಿನದಲ್ಲಿ ತಮ್ಮ ಲಿಸ್ಟ್-3 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಅಲಿ ಅಕ್ಬರ್‌ನನ್ನು ಹಿಂದಿಕ್ಕಿದ್ದಾರೆ.

ಮೊದಲ ಪಂದ್ಯದಲ್ಲೇ ನಿರಾಶೆ

ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿನ ತಮ್ಮ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ನಿರಾಶೆ ಅನುಭವಿಸಿದರು. ಅವರು ಆಡಿದ 2 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ಔಟಾದರು. ಇದರ ಜೊತೆಗೆ ಬಿಹಾರ ತಂಡ ತನ್ನ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿಹಾರ ತಂಡವು ಕೇವಲ 196 ರನ್ ಗಳಿಸಲಷ್ಟೇ ಶಕ್ತವಾಯಿತು. ಗೆಲ್ಲಲು 197 ರನ್‌ಗಳ ಗುರಿ ಪಡೆದ ಮಧ್ಯಪ್ರದೇಶ 24.5 ಓವರ್‌ಗಳು ಬಾಕಿ ಇರುವಂತೆಯೇ ಸುಲಭವಾಗಿ ಗೆಲುವಿನ ದಡ ಮುಟ್ಟಿತು.

ಐಪಿಎಲ್ ಸೆನ್ಸೇಷನ್ ವೈಭವ್ ಸೂರ್ಯವಂಶಿ

ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್​ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ಲಿಸ್ಟ್ ಎ ಕ್ರಿಕೆಟ್​ನಲ್ಲೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT