ವಿನೋದ್ ಕಾಂಬ್ಳಿ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಐಎಎನ್‌ಎಸ್‌ನ ಎಕ್ಸ್ ಪೋಸ್ಟ್ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ಸಹ ಆಟಗಾರ ವಿನೋದ್ ಕಾಂಬ್ಳಿ ಅವರು ಶನಿವಾರ ತಡರಾತ್ರಿ ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ವಿನೋದ್ ಕಾಂಬ್ಳಿ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ಸಂಸ್ಥೆ ಐಎಎನ್‌ಎಸ್‌ನ ಎಕ್ಸ್ ಪೋಸ್ಟ್ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ಸಹ ಆಟಗಾರ ವಿನೋದ್ ಕಾಂಬ್ಳಿ ಅವರು ಶನಿವಾರ ತಡರಾತ್ರಿ ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಸ್ಥಿತಿ ಈಗ ಸ್ಥಿರವಾಗಿದೆ. ಆದರೆ ಗಂಭೀರವಾಗಿದೆ ಎಂದು ಐಎಎನ್‌ಎಸ್‌ ವರದಿ ಮಾಡಿದೆ.

ಸೋಮವಾರ ಅಭಿಮಾನಿಯೊಬ್ಬರು ವಿನೋದ್ ಕಾಂಬ್ಳಿ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದನ್ನು ಕಾಣಬಹುದಾಗಿದೆ.

ಕಾಂಬ್ಳಿ ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ನ ಸಂದರ್ಶನವೊಂದರಲ್ಲಿ ತಾನು ಗಂಭೀರ ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಕಾಂಬ್ಳಿ ಅನೇಕ ಕಾಯಿಲೆಗಳಿಂದ ಬಳಲುತ್ತಿರುವುದಾಗಿಯೂ ಹೇಳಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!