ಆಸ್ಪತ್ರೆಯಲ್ಲಿ ವಿನೋದ್ ಕಾಂಬ್ಳಿ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಅನಾರೋಗ್ಯ: ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!

ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ.ವಿವೇಕ್​ ತ್ರಿವೇದಿ, ಕಾಂಬ್ಳಿ ಅವರ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತಿದೆ ಎಂದು ಘೋಷಿಸಿದರು.

ಮುಂಬೈ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸದ್ಯ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಮೂತ್ರ ಸೋಂಕು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅವರು ಇದೀಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗೂ ಒಳಗಾಗಿದ್ದಾರೆ.

ಸದ್ಯ ಮಹಾರಾಷ್ಟ್ರದ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಕಾಂಬ್ಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ.ವಿವೇಕ್​ ತ್ರಿವೇದಿ, ಕಾಂಬ್ಳಿ ಅವರ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತಿದೆ ಎಂದು ಘೋಷಿಸಿದರು. ಆಸ್ಪತ್ರೆಯ ಉಸ್ತುವಾರಿ ಎಸ್​.ಸಿಂಗ್​ ಅವರು ಉಚಿತ ಚಿಕಿತ್ಸೆಯ ನೀಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ ಅವರು, ಕಾಂಬ್ಳಿ ಚಿಕಿತ್ಸೆ ಬಗ್ಗೆ ಯಾರು ಯೋಚಿಸುವಂತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೀಗ ಉಚಿತ ಚಿಕಿತ್ಸೆಯ ಬಗ್ಗೆ ನಿರ್ಧಾರ ಕೈಗೊಂಡಿರುವ ಉಸ್ತುವಾರಿ ಸಿಂಗ್​ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮೂತ್ರದ ಸೋಂಕು ಮತ್ತು ಕಾಲು ಸೆಳೆತದಿಂದ ಕಾಂಬ್ಳಿ ಆಸ್ಪತ್ರೆಗೆ ದಾಖಲಾದ ನಂತರ, ಆಸ್ಪತ್ರೆಯ ಸಿಬ್ಬಂದಿ ಅವರಿಗೆ ಹಲವಾರು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದರು. ಅವರ ಆರೋಗ್ಯವನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ಇಂದು ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಡಾ.ವಿವೇಕ್ ತ್ರಿವೇದಿ ತಿಳಿಸಿದ್ದಾರೆ. ಸದ್ಯ ಕಾಂಬ್ಳಿ ಆರೋಗ್ಯ ಸ್ಥಿರವಾಗಿದೆ. ಆದರೆ, ಕಾಂಬ್ಬಿ ಅವರು ಐಸಿಯುನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿರಬೇಕು ಎಂದು ಡಾ.ವಿವೇಕ್​ ತ್ರಿವೇದಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಆಸ್ಪತ್ರೆಯಲ್ಲಿನ ಚಿಕಿತ್ಸೆ ಬಗ್ಗೆ ಮಾತನಾಡಿರುವ ವಿನೋದ್ ಕಾಂಬ್ಳಿ ವೈದ್ಯರು ಹೇಳುವುದನ್ನು ಚಾಚೂ ತಪ್ಪದೇ ಪಾಲಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ವೈದ್ಯರಿಂದಾಗಿ ನಾನು ಇಂದು ಜೀವಂತವಾಗಿದ್ದೇನೆ. ಇದೇ ವೇಳೆ ವೈದ್ಯಕೀಯ ತಂಡದ ನಡೆಯ ಬಗ್ಗೆ ಭಾವುಕರಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!