ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತದ ಪರ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ನಿತೀಶ್ ಕುಮಾರ್ ರೆಡ್ಡಿ, ಆಸ್ಟ್ರೇಲಿಯಾ ನೆಲದಲ್ಲಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮ ಆಚರಿಸಿದರು.
ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಭಾರತಕ್ಕೆ ನೆರವಾದರು. ಒಂದು ಹಂತದಲ್ಲಿ ಭಾರತ ಕೇವಲ 191ರನ್ ಗಳಿಗೆ ಆರು ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿ ಸಿಲುಕಿತ್ತು.
ಈ ಹಂತದಲ್ಲಿ ಬ್ಯಾಟಿಂಗ್ ಗೆ ಇಳಿದ ನಿತೀಶ್ ಕುಮಾರ್ ರೆಡ್ಡಿ ನಿಧಾನವಾಗಿ ಬ್ಯಾಟಿಂಗ್ ಲಯ ಕಂಡುಕೊಂಡು ಆಸಿಸ್ ಬೌಲರ್ ಗಳ ಮೇಲೆ ಸವಾರಿ ಮಾಡಿ ಭರ್ಜರಿ ಶತಕ ಸಿಡಿಸಿದರು. ಒಟ್ಟು 176 ಎಸೆತಗಳನ್ನು ಎದುರಿಸಿದ ನಿತೀಶ್ ಕುಮಾರ್ ರೆಡ್ಡಿ 1 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 105ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
ನಿತೀಶ್-ಸುಂದರ್ ಜವಾಬ್ದಾರಿಯುತ ಬ್ಯಾಟಿಂಗ್
191 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗೆ ಇಳಿದ ನಿತೀಶ್ ರೆಡ್ಡಿ, ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದರು. ವಾಷಿಂಗ್ಟನ್ ಸುಂದರ್ (50 ರನ್) ಅವರೊಂದಿಗೆ ಶತಕದ ಜೊತೆಯಾಟವಾಡಿದ ಅವರು, ಭಾರತವನ್ನು ಕನಿಷ್ಠ ಮೊತ್ತಕ್ಕೆ ಕುಸಿಯುವ ಆತಂಕ ಹಾಗೂ ಫಾಲೋಆನ್ ಭೀತಿಯಿಂದ ಪಾರು ಮಾಡಿದರು.
ಆತಿಥೇಯ ವೇಗಿಗಳಾದ ಮಿಚೇಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲ್ಯಾಂಡ್ ಹಾಗೂ ಸ್ಪಿನ್ನರ್ ನೇಥನ್ ಲಯನ್ ಅವರಂತಹ ವಿಶ್ವ ಶ್ರೇಷ್ಠ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ 21 ವರ್ಷದ ಆಟಗಾರ, 176 ಎಸೆತಗಳಲ್ಲಿ 105 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ತಂಡದ ಮೊತ್ತ 9 ವಿಕೆಟ್‌ಗೆ 358 ರನ್ ಆಗಿದೆ. ರೆಡ್ಡಿ ಜೊತೆ ಮೊಹಮ್ಮದ್ ಸಿರಾಜ್ (2 ರನ್) ಕ್ರೀಸ್‌ನಲ್ಲಿದ್ದಾರೆ. ಗುರುವಾರ ಆರಂಭವಾದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 474 ರನ್ ಗಳಿಸಿದ್ದು, ಭಾರತ ಇನಿಂಗ್ಸ್ ಹಿನ್ನಡೆ ತಪ್ಪಿಸಿಕೊಳ್ಳಲು ಇನ್ನೂ 116 ರನ್ ಗಳಿಸಬೇಕಿದೆ.
Highest score batting at #8 or below for India in Australia
107* Nitish Reddy Melbourne 2024
87 Anil Kumble Adelaide 2008
81 Ravindra Jadeja Sydney 2019
67* Kiran More Melbourne 1991
67 Shardul Thakur Brisbane 2021
ಭರ್ಜರಿ ದಾಖಲೆ
ಈ ಶತಕದ ಮೂಲಕ ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ 3ನೇ ಅತಿ ಕಿರಿಯ ಹಾಗೂ 8ನೇ ಕ್ರಮಾಂಕದಲ್ಲಿ ಮೂರಂಕಿ ದಾಟಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೂ ಭಾಜನರಾದರು. ಇಂದಿನ ಅಜೇಯ ಶತಕದೊಂದಿಗೆ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿರುವ ನಿತೀಶ್ ರೆಡ್ಡಿ, ಸಚಿನ್ ತೆಂಡೂಲ್ಕರ್ ಹಾಗೂ ರಿಷಬ್ ಪಂತ್ ಬಳಿಕ ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಶತಕ ಸಿಡಿಸಿದ ನಿತೀಶ್ ರೆಡ್ಡಿ ವಯಸ್ಸು ಇಂದಿಗೆ 21 ವರ್ಷ 216 ದಿನಗಳಾಗಿದ್ದು, ಇದೀಗ ಕಿರಿಯ ವಯಸ್ಸಿನಲ್ಲಿ ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.
ಅಗ್ರ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅವರು 1992ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದಾಗ ಅವರ ವಯಸ್ಸು 18 ವರ್ಷ 256 ದಿನಗಳಾಗಿದ್ದವು. 2ನೇ ಸ್ಥಾನದಲ್ಲಿ ರಿಷಬ್ ಪಂತ್ ಇದ್ದು, 2019ರಲ್ಲಿ ಸಿಡ್ನಿಯಲ್ಲಿ ನೂರು ರನ್ ಗಳಿಸಿದಾಗ ರಿಷಭ್ ಪಂತ್‌ಗೆ 21 ವರ್ಷ 92 ದಿನ ವಯಸ್ಸಾಗಿತ್ತು. ಇದಕ್ಕೂ ಮೊದಲು ಭಾರತದ ದತ್ತು ಫಾಡ್ಕರ್ ಅವರು 1948ರಲ್ಲಿ ಅಡಿಲೇಡ್‌ನಲ್ಲಿ ಶತಕ ಗಳಿಸಿದ್ದರು. ಆಗ ಅವರ ವಯಸ್ಸು 22 ವರ್ಷ 46 ದಿನಗಳು.
8ನೇ ಕ್ರಮಾಂಕದಲ್ಲಿ ಗರಿಷ್ಠ ರನ್ ದಾಖಲೆ
ಕಾಂಗರೂ ನೆಲದಲ್ಲಿ ಆಡಿದ ಟೆಸ್ಟ್ ಪಂದ್ಯಗಳಲ್ಲಿ 8 ಅಥವಾ ಅದಕ್ಕಿಂತ ಕೆಳಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆ ರೆಡ್ಡಿ ಅವರದ್ದಾಯಿತು. ಮೆಲ್ಬರ್ನ್ ಪಂದ್ಯಕ್ಕೂ ಮುನ್ನ, ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಲ್ಲಿತ್ತು. ಅವರು 2008ರಲ್ಲಿ ಅಡಿಲೇಡ್ ಟೆಸ್ಟ್‌ನಲ್ಲಿ 87 ರನ್ ಗಳಿಸಿದ್ದರು. 2019ರಲ್ಲಿ ಸಿಡ್ನಿಯಲ್ಲಿ 81 ರನ್ ಗಳಿಸಿದ್ದ ರವೀಂದ್ರ ಜಡೇಜ ನಂತರದ ಸ್ಥಾನದಲ್ಲಿದ್ದಾರೆ.
Youngest at the time of maiden Test century for India in Australia
18y 256d Sachin Tendulkar Sydney 1992
21y 92d Rishabh Pant Sydney 2019
21y 216d Nitish Reddy Melbourne 2024
22y 46d Dattu Phadkar Adelaide 1948