ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾ

ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.

ನವದೆಹಲಿ: ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 106 ರನ್ ಗಳ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದ್ದು, 2ನೇ ಸ್ಥಾನಕ್ಕೇರಿದೆ.

ಈ ಹಿಂದೆ ಮೊದಲ ಟೆಸ್ಟ್​ನಲ್ಲಿ ಸೋತು ಅಂಕ ಕಳೆದುಕೊಂಡು ಕುಸಿತ ಕಂಡಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಅಮೋಘ ಗೆಲುವು ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಾಯಿಂಟ್​ ಟೇಬಲ್​ನಲ್ಲೂ ಮೇಲೇರಿದೆ. ಶೇ.52.77 ಗೆಲುವಿನ ಪ್ರಮಾಣದೊಂದಿಗೆ ಭಾರತ ತಂಡ ಇದೀಗ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. 10 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 6 ಜಯ ಹಾಗೂ 1 ಡ್ರಾನೊಂದಿಗೆ ಆಸ್ಟ್ರೇಲಿಯಾ ತಂಡ ಒಟ್ಟು 55% ಗೆಲುವಿನ ಶೇಕಡಾವಾರು ಹೊಂದು ಮೂಲಕ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಅಂತೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಭಾರತ ತಂಡವು 3 ಗೆಲುವು ಹಾಗೂ 1 ಡ್ರಾನೊಂದಿಗೆ 52.77% ಗೆಲುವಿನ ಶೇಕಡಾವಾರು ಹೊಂದಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಆಫ್ರಿಕಾ (50%) ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ (50%) ಹಾಗೂ ಬಾಂಗ್ಲಾದೇಶ್ (50%) ತಂಡಗಳು ಕ್ರಮವಾಗಿ 4ನೇ ಮತ್ತು 5ನೇ ಸ್ಥಾನಗಳಲ್ಲಿದೆ. 

ಇನ್ನು ಭಾರತದ ವಿರುದ್ಧ ಸೋತಿರುವ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದ್ದು, ಇದುವರೆಗೆ ಆಡಿದ 7 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ 3 ಗೆಲುವು ಹಾಗೂ 1 ಡ್ರಾನೊಂದಿಗೆ 33.33% ಗೆಲುವಿನ ಶೇಕಡಾವಾರು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT