ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿ: ಒಂದೇ ದಿನಕ್ಕೆ ಮತ್ತೆ ಕೆಳಗೆ ಕುಸಿದ ಟೀಂ ಇಂಡಿಯಾ, ಕಾರಣ ನ್ಯೂಜಿಲೆಂಡ್!

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಒಂದೇ ದಿನದಲ್ಲಿ ಮತ್ತೆ ಕುಸಿತಗೊಂಡಿದೆ.

ನ್ಯೂಜಿಲೆಂಡ್ ಮತ್ತು ಭಾರತ ತಂಡ (ಸಂಗ್ರಹ ಚಿತ್ರ)
Srinivasa Murthy VN
Updated On : 7 Feb 2024, 7:18 pm

ಮುಂಬೈ: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಒಂದೇ ದಿನದಲ್ಲಿ ಮತ್ತೆ ಕುಸಿತಗೊಂಡಿದೆ.

ಹೌದು.. ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ ಡಬ್ಲ್ಯುಟಿಸಿಯ ಪಾಯಿಂಟ್ ಪಟ್ಟಿಯಲ್ಲಿ ಭಾರಿ ಬದಲಾವಣೆ ಕಂಡು ಬಂದಿದ್ದು, ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡನೇ ಸ್ಥಾನಕ್ಕೆ ತಲುಪಿತ್ತು. ಆದರೆ ಇದೀಗ ಮತ್ತೊಮ್ಮೆ ಟಾಪ್ 2 ರಿಂದ ಹೊರಬಿದ್ದಿದ್ದು, ಹೊಸ ತಂಡವೊಂದು ಟಾಪ್ 2 ರೊಳಗೆ ಪ್ರವೇಶಿಸಿದೆ.

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾ

Advertisement

Advertisement

ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಕಿವೀ ತಂಡ ಅಂದರೆ ನ್ಯೂಜಿಲೆಂಡ್ 281 ರನ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದ ಗೆಲುವಿನೊಂದಿಗೆ ಡಬ್ಲ್ಯುಟಿಸಿಯ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. ನ್ಯೂಜಿಲೆಂಡ್ ಅಗ್ರಸ್ಥಾನಕ್ಕೇರಿದ ಕಾರಣ ಇದೀಗ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ಒಂದೊಂದು ಸ್ಥಾನ ಕುಸಿತ ಕಂಡಿವೆ. 

ಟೀಂ ಇಂಡಿಯಾ ಈಗ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಾರಿದ್ದರೆ, ಆಸ್ಟ್ರೇಲಿಯಾ ತಂಡ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡು ಎರಡನೇ ಸ್ಥಾನಕ್ಕೆ ಇಳಿದಿದೆ. ನ್ಯೂಜಿಲೆಂಡ್ ತಂಡ ಈ ಸೀಸನ್​ನಲ್ಲಿ ಮೊದಲ ಬಾರಿಗೆ ಅಗ್ರಸ್ಥಾನವನ್ನು ತಲುಪಿದ್ದು, ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತಿದೆ.

ಇದನ್ನೂ ಓದಿ: ಅಂಡರ್ 19 ವಿಶ್ವಕಪ್: ಸಚಿನ್, ಸಹರನ್ ಅದ್ಭುತ ಅರ್ಧ ಶತಕ, ಫೈನಲ್ ತಲುಪಿದ ಭಾರತ

ಡಬ್ಲ್ಯುಟಿಸಿ 2023- 25 ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತಂಡ ಇದುವರೆಗೆ ಒಟ್ಟು ಮೂರು ಪಂದ್ಯಗಳನ್ನು ಆಡಿದೆ. ಅದರಲ್ಲಿ ಎರಡು ಪಂದ್ಯಗಳನ್ನು ಗೆದ್ದಿದ್ದು, ಒಂದೇ ಒಂದು ಪಂದ್ಯದಲ್ಲಿ ಸೋಲನ್ನು ಎದುರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡ 66.66 ಪಿಟಿಸಿ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಅಂತೆಯೇ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನೂ ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದ್ದ ಭಾರತ ಭಾರಿ ಅಂತರದ ಗೆಲುವು ಸಾಧಿಸಿತ್ತು.

ಡಬ್ಲ್ಯುಟಿಸಿ 2023- 25 ರ ಆವೃತ್ತಿಯಲ್ಲಿ ಟೀಂ ಇಂಡಿಯಾ ಇದುವರೆಗೆ 6 ಪಂದ್ಯಗಳಲ್ಲಿ ಮೂರು ಗೆಲುವು, ಎರಡು ಸೋಲು ಮತ್ತು ಒಂದು ಡ್ರಾದೊಂದಿಗೆ WTC ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗೆಯೇ 52.77 ಪಿಟಿಸಿ ಪಾಯಿಂಟ್ಸ್ ಹೊಂದಿದ್ದು, ಭಾರತಕ್ಕಿಂತ ಸ್ವಲ್ಪ ಮೇಲಿರುವ ಆಸ್ಟ್ರೇಲಿಯಾ ತಂಡ 55 ಪಿಟಿಸಿ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments