ರೋಹಿತ್ ಶರ್ಮಾ
ರೋಹಿತ್ ಶರ್ಮಾ BCCI
ಕ್ರಿಕೆಟ್

3ನೇ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ 79ನೇ ಸಿಕ್ಸರ್ ಸಿಡಿಸಿದ ರೋ'ಹಿಟ್' ಶರ್ಮಾ; ಧೋನಿ ದಾಖಲೆ ಪತನ

Srinivasamurthy VN

ರಾಜ್ ಕೋಟ್: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ನಡೆಸಿರುವ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಘಾತದ ಹೊರತಾಗಿಯೂ ಭಾರತ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ರೋಹಿತ್ ಶರ್ಮಾ 185 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 12 ಬೌಂಡರಿಗಳ ನೆರವಿನಿಂದ 120 ರನ್ ಗಳಿಸಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಮಹೇಂದ್ರ ಸಿಂಗ್ ಧೋನಿ ಅವರ ಸಿಕ್ಸರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಧೋನಿ ಟೆಸ್ಟ್ ಕ್ರಿಕೆಟ್ ನಲ್ಲಿ 78 ಸಿಕ್ಸರ್ ಗಳನ್ನು ಸಿಡಿಸಿದ್ದು, ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79ನೇ ಸಿಕ್ಸರ್ ಸಿಡಿಸಿ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದು ಅವರು 128 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಅಂತೆಯೇ ಭಾರತದ ಪರ ಈ ಪಟ್ಟಿಯಲ್ಲಿ ವಿರೇಂದ್ರ ಸೆಹ್ವಾಗ್ ಇದ್ದು ಅವರು 91 ಸಿಕ್ಸರ್ ಗಳನ್ನು ಸಿಡಿಸಿ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿರುವ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದು, ಮಹೇಂದ್ರ ಸಿಂಗ್ ಧೋನಿ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಭಾರತದ ಸವ್ಯಸಾಚಿ ಸಚಿನ್ ತೆಂಡೂಲ್ಕರ್ 69 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ.

SCROLL FOR NEXT