ಕ್ರಿಕೆಟ್

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ದಾಖಲೆಯ 434 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದ ಭಾರತ

ಆತಿಥೇಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಂಗ್ಲರ ವಿರುದ್ಧ 434 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ರಾಜಕೋಟ್: ಆತಿಥೇಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಂಗ್ಲರ ವಿರುದ್ಧ 434 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ರಾಜಕೋಟ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಂದು ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 430 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 122 ರನ್ ಗಳಿಗೆ ಆಲೌಟ್ ಆಗಿದೆ.

ಇಂಗ್ಲೆಂಡ್ ತಂಡಕ್ಕೆ ರವೀಂದ್ರ ಜಡೇಜಾ ಮಾರಕರಾದರು. ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಅವರು 5 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಜಡೇಜಾ ಅವರು ಇಂಗ್ಲೆಂಡ್ ನ ಒಲಿ ಪೋಪ್ (3 ರನ್), ಜಾನಿ ಬೈರ್ಸ್ಟೋವ್ (4 ರನ್), ಜೋ ರೂಟ್ (7 ರನ್), ಬೆನ್ ಫೋಕ್ಸ್ (16 ರನ್) ಹಾಗೂ ಮಾರ್ಕ್ ವುಡ್ (33 ರನ್) ರನ್ನು ಔಟ್ ಮಾಡಿದರು. ಇನ್ನುಳಿದಂತೆ ಕುಲದೀಪ್ ಯಾದವ್ 2, ಜಸ್ ಪ್ರೀತ್ ಬುಮ್ರಾ ಹಾಗೂ ರವಿಚಂದ್ರನ್ ಅಶ್ವಿನ್ ತಲಾ 1 ವಿಕೆಟ್ ಪಡೆದಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯ ಫೆಬ್ರವರಿ 23ರಿಂದ ರಾಂಚಿಯಲ್ಲಿ ನಡೆಯಲಿದೆ.

ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಮೂರನೇ ದಿನ ಭಾರತದ ಪರ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಜೈಸ್ವಾಲ್ ಗಾಯಗೊಂಡು ನಿವೃತ್ತಿ ಗೊಂಡಿದ್ದರು. ಬಳಿಕ ನಾಲ್ಕನೇ ದಿನದಾಟದಲ್ಲಿ ಶುಭಮನ್ ಗಿಲ್‌ (91) ವಿಕೆಟ್‌ ಪತನದ ಬಳಿಕ ಮರಳಿ ಕ್ರೀಸ್‌ಗೆ ಬಂದು ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿಬದುಕಿನ 2ನೇ ದ್ವಿಶತಕ ಬಾರಿಸಿದರು.

ಇಂಗ್ಲೆಂಡ್ ವಿರುದ್ಧ 2 ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್

ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಸರಣಿ ಒಂದರಲ್ಲಿ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್‌ ಎಂಬ ದಾಖಲೆಯನ್ನು 22 ವರ್ಷದ ಯುವ ಎಡಗೈ ಬ್ಯಾಟರ್‌ ತಮ್ಮದಾಗಿಸಿಕೊಂಡರು. ವಿರಾಟ್‌ ಕೊಹ್ಲಿ (2017ರಲ್ಲಿ) ಮತ್ತು ವಿನೋದ್‌ ಕಾಂಬ್ಳಿ (1993ರಲ್ಲಿ) ಈ ಮೊದಲು ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಬಾರಿಸಿದ ಭಾರತೀಯ ಬ್ಯಾಟರ್‌ಗಳಾಗಿದ್ದಾರೆ.

2ನೇ ಇನ್ನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ಎಲೈಟ್ ಪಟ್ಟಿ ಸೇರಿದ ಜೈಸ್ವಾಲ್

ಇನ್ನು ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ಈ ಸಾಧನೆ ಮಾಡಿದ ಇತರೆ ಭಾರತೀಯ ಆಟಗಾರರ ಎಲೈಟ್ ಪಟ್ಟಿ ಸೇರಿದ್ದಾರೆ. ಈ ಹಿಂದೆ 1964 ಮನ್ಸೂಲ್‌ ಅಲಿ ಖಾನ್‌ ಪಟೌಡಿ (ಅಜೇಯ 203 ರನ್), 1965ರಲ್ಲಿ ಡಿ ಸರ್ದೇಸಾಯ್‌ (ಅಜೆಯೇ 200 ರನ್), 1971ರಲ್ಲಿ ಸುನಿಲ್ ಗವಾಸ್ಕರ್ (220 ರನ್), 2001ರಲ್ಲಿ ವಿವಿಎಸ್ ಲಕ್ಷಣ್ (281 ರನ್) ಮತ್ತು 2006ರಲ್ಲಿ ವಸೀಂ ಜಾಫರ್ (212 ರನ್) ದ್ವಿತಶಕ ಸಿಡಿಸಿದ ಸಾಧನೆ ಗೈದಿದ್ದಾರೆ. ಇದೀಗ ಈ ಪಟ್ಟಿಗೆ ಜೈಸ್ವಾಲ್ ಕೂಡ ಸೇರ್ಪಡೆಯಾಗಿದ್ದಾರೆ.

ಸಿಕ್ಸರ್ ನಲ್ಲೂ ಜೈಸ್ವಾಲ್ ದಾಖಲೆ

ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಿಡಿಸಿದ ಜೈಸ್ವಾಲ್, ಇದೇ ಪಂದ್ಯದಲ್ಲಿ ಸಿಕ್ಸರ್ ಗಳ ಮೂಲಕವೂ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 2ನೇ ಇನ್ನಿಂಗ್ಸ್ ನಲ್ಲಿ ಜೈಸ್ವಾಲ್ ಒಟ್ಟು 12 ಸಿಕ್ಸರ್ ಸಿಡಿಸಿದ್ದು, ಆ ಮೂಲಕ 1996ರಲ್ಲಿ ಪಾಕಿಸ್ತಾನದ ಆಲ್ರೌಂಡರ್ ವಸೀಂ ಅಕ್ರಂರ ದಾಖಲೆಯನ್ನು ಜೈಸ್ವಾಲ್ ಸರಿಗಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!