ಯಶಸ್ವಿ ಜೈಸ್ವಾಲ್ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!

ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಶನಿವಾರ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸುವ ಮೂಲಕ ಹೊಸ ದಾಖಲೆ ಬರೆದರು.

ರಾಂಚಿ: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಶನಿವಾರ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸುವ ಮೂಲಕ ಹೊಸ ದಾಖಲೆ ಬರೆದರು. ಟೆಸ್ಟ್ ಸರಣಿಯಲ್ಲಿ 600ಕ್ಕಿಂತ ಹೆಚ್ಚು ರನ್ ಗಳಿಸಿದ ಐದನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಳೆದ ವರ್ಷ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಎಡಗೈ ಬ್ಯಾಟ್ಸ್‌ಮನ್ ಜೈಸ್ವಾಲ್, ಶೋಯೆಬ್ ಬಶೀರ್ ಅವರ ಎಸೆತದಲ್ಲಿ 73 ರನ್ ಗಳಿಸಿ ಔಟಾದರು.

ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಎರಡನೇ ಮತ್ತು ಮೂರನೇ ಟೆಸ್ಟ್‌ ಪಂದ್ಯಗಳಲ್ಲಿ ಎರಡು ದ್ವಿಶತಕ ಬಾರಿಸಿ, ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

22 ವರ್ಷದ ಜೈಸ್ವಾಲ್ ಅವರು ಟೆಸ್ಟ್ ಸರಣಿಯಲ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಐದನೇ ಆಟಗಾರ ಎನಿಸಿಕೊಂಡರು. ಈ ಮೊದಲು ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ದಿಲೀಪ್ ಸರ್ದೇಸಾಯಿ ಅವರು ಈ ಸಾಧನೆ ಮಾಡಿದ್ದರು. ಇದೀಗ ಜೈಸ್ವಾಲ್ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕರಾದ ಗವಾಸ್ಕರ್, ಕೊಹ್ಲಿ ಮತ್ತು ದ್ರಾವಿಡ್ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಟೆಸ್ಟ್ ಸರಣಿಯಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ್ದರು. ಆದರೆ, ಸರ್ದೇಸಾಯಿ ಅವರು 1970-71ರಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಸರಣಿಯಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿ ಸಾಧನೆ ಮಾಡಿದ್ದರು.

ವೆಸ್ಟ್ ಇಂಡೀಸ್‌ನಲ್ಲಿ ನಡೆದ ಅದೇ ಸರಣಿಯಲ್ಲಿ ಗವಾಸ್ಕರ್ ಅವರು ನಾಲ್ಕು ಶತಕಗಳು ಮತ್ತು ಮೂರು ಅರ್ಧ ಶತಕಗಳೊಂದಿಗೆ 774 ರನ್ ಗಳಿಸುವ ಮೂಲಕತ ಟೆಸ್ಟ್ ಸರಣಿಯೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಎರಡು ಟೆಸ್ಟ್ ಸರಣಿಗಳಲ್ಲಿ 700ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆ ಕೂಡ ಗವಾಸ್ಕರ್ ಅವರದ್ದಾಗಿದೆ. 1978-79ರಲ್ಲಿ ವೆಸ್ಟ್ ಇಂಡೀಸ್ ತಂಡವು ಭಾರತ ಪ್ರವಾಸ ಕೈಗೊಂಡಾಗ ಗವಾಸ್ಕರ್ ಅವರು ಆರು ಟೆಸ್ಟ್‌ಗಳಲ್ಲಿ 732 ರನ್ ಗಳಿಸಿದ್ದರು.

1930 ರಲ್ಲಿ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ ಪಂದ್ಯಗಳಲ್ಲಿ ನಾಲ್ಕು ಶತಕಗಳೊಂದಿಗೆ 974 ರನ್ ಗಳಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ದಂತಕಥೆ ಡೊನಾಲ್ಡ್ ಬ್ರಾಡ್‌ಮನ್ ಅವರು ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT