ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅರುಂಧತಿ ರೆಡ್ಡಿ 
ಕ್ರಿಕೆಟ್

DC vs UPW: ಪಂದ್ಯದ ವೇಳೆ ಅನುಚಿತ ವರ್ತನೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಅರುಂಧತಿ ರೆಡ್ಡಿಗೆ ದಂಡ

ಯುಪಿ ವಾರಿಯರ್ಸ್ ವಿರುದ್ಧ ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಅರುಂಧತಿ ರೆಡ್ಡಿ ಅವರಿಗೆ ದಂಡ ವಿಧಿಸಲಾಗಿದೆ.

ನವದೆಹಲಿ: ಯುಪಿ ವಾರಿಯರ್ಸ್ ವಿರುದ್ಧ ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಅರುಂಧತಿ ರೆಡ್ಡಿ ಅವರಿಗೆ ದಂಡ ವಿಧಿಸಲಾಗಿದೆ.

ಡೆಲ್ಲಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ವೇಳೆ ಅರುಂಧತಿ ಅವರು ಅನುಚಿತವಾಗಿ ವರ್ತಿಸಿದ್ದು, ಅವರಿಗೆ ಪಂದ್ಯ ಶುಲ್ಕದ ಶೇ 10ರಷ್ಟನ್ನು ದಂಡ ವಿಧಿಸಲಾಗಿದೆ.

ಡಬ್ಲ್ಯುಪಿಎಲ್ ಹೇಳಿಕೆ ನೀಡಿದ್ದು, 'ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಡಬ್ಲ್ಯುಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ನ ಅರುಂಧತಿ ರೆಡ್ಡಿಗೆ ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ' ಎಂದಿದೆ.

ಡಬ್ಲ್ಯುಪಿಎಲ್‌ನ ನೀತಿ ಸಂಹಿತೆಯ ವಿಧಿಯ 2.5 ರ ಅಡಿಯಲ್ಲಿ ರೆಡ್ಡಿ ಅವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ವಿಧಿಯು, ಅನುಚಿತ ಭಾಷೆ, ವರ್ತನೆ ಅಥವಾ ಸನ್ನೆಗಳನ್ನು ಬಳಸುವುದಕ್ಕೆ ಸಂಬಂಧಿಸಿದೆ. ಪಂದ್ಯದ ಸಮಯದಲ್ಲಿ ತನ್ನ ಕ್ರಿಕೆಯ ಮೂಲಕ ಎದುರಾಳಿ ತಂಡದ ಬ್ಯಾಟರ್‌ ಅನ್ನು ಪ್ರಚೋದಿಸಲು ಕಾರಣವಾಗುವ ವಿಚಾರಕ್ಕೆ ಸಂಬಂಧಿಸಿದೆ. ನೀತಿ ಸಂಹಿತೆಯ ಹಂತ 1ರ ಉಲ್ಲಂಘನೆಗಳಿಗೆ, ಪಂದ್ಯದ ರೆಫರಿಯ ನಿರ್ಧಾರವು ಅಂತಿಮವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಪಂದ್ಯದ ವೇಳೆ, ಅರುಂಧತಿ ರೆಡ್ಡಿ ಅವರು ಯುಪಿ ತಂಡದ ಕೆಳ ಕ್ರಮಾಂಕದ ಬ್ಯಾಟರ್ ಪೂನಂ ಖೆಮ್ನಾರ್ ಅವರ ವಿಕೆಟ್ ಪಡೆದರು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ವಿರುದ್ಧ 9 ವಿಕೆಟ್ ಅಂತರದ ಗೆಲುವು ಸಾಧಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ಯುಪಿ ತಂಡವನ್ನು ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 119 ರನ್‌ಗಳಿಗೆ ಕಟ್ಟಿಹಾಕಿದರು.

ಈ ರನ್ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14.4 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ತಲುಪಿತು. ಮೆಗ್ ಲ್ಯಾನಿಂಗ್ 51 ಮತ್ತು ಶಫಾಲಿ ವರ್ಮಾ ಅವರ ಜೊತೆಯಾಟ ತಂಡಕ್ಕೆ ಗೆಲುವನ್ನು ತಂದುಕೊಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!