ರೋಹಿತ್ ಶರ್ಮಾ 
ಕ್ರಿಕೆಟ್

ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಹಲವು ದಾಖಲೆ ಸೃಷ್ಟಿ: ಧೋನಿ ಕ್ಲಬ್‌ಗೆ ಪ್ರವೇಶ

ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್‌ಗಿಂತ ಮೊದಲು ಎಂಎಸ್ ಧೋನಿ 2011ರಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದ್ದರು.

ನವದೆಹಲಿ: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್‌ಗಿಂತ ಮೊದಲು ಎಂಎಸ್ ಧೋನಿ 2011ರಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದ್ದರು. ಇದಲ್ಲದೇ ಕೇಪ್ ಟೌನ್ ನಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

2 ದಿನಗಳಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯನ್ ನಾಯಕ
ಅಫ್ಘಾನಿಸ್ತಾನ ವಿರುದ್ಧ ಅಜಿಂಕ್ಯ ರಹಾನೆ, ಬೆಂಗಳೂರು 2018
ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ, ಅಹಮದಾಬಾದ್ 2021
ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ, ಕೇಪ್ ಟೌನ್ 2024

ಕೇಪ್‌ಟೌನ್‌ನಲ್ಲಿ ಮೊದಲ ಗೆಲುವು
ಈ ಹಿಂದೆ ಕೇಪ್ ಟೌನ್‌ನಲ್ಲಿ ಆಡಿದ ಆರು ಟೆಸ್ಟ್ ಪಂದ್ಯಗಳಲ್ಲಿ ಭಾರತ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದರೆ ನಾಲ್ಕರಲ್ಲಿ ಸೋಲನ್ನು ಎದುರಿಸಬೇಕಾಯಿತು. 1993ರಲ್ಲಿ ಮೊಹಮ್ಮದ್ ಅಜರುದ್ದೀನ್ ಮತ್ತು 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಟೆಸ್ಟ್ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. ರೋಹಿತ್ ಇಲ್ಲಿ ನಡೆದ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಸತತ ಐದು ಸೋಲಿನ ಬಳಿಕ ಗೆಲುವು
ಭಾರತ 2021-22ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎರಡು ಪಂದ್ಯಗಳನ್ನು ಸೋತಿತ್ತು. ಇದಾದ ನಂತರ ಡಬ್ಲ್ಯುಟಿಸಿ ಫೈಲಿನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಹಾಗೂ ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಸೋಲು ಕಂಡಿದೆ. ಅದೇ ಸಮಯದಲ್ಲಿ, ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT