ವಿರಾಟ್ ಕೊಹ್ಲಿ 
ಕ್ರಿಕೆಟ್

ಕೇಪ್ ಟೌನ್ ಮೈದಾನದಲ್ಲಿ ಶ್ರೀರಾಮ ಬಿಲ್ಲು ಎಳೆಯುವಂತೆ ಪೋಸ್ ನೀಡಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ವೇಳೆ 'ರಾಮ್ ಸಿಯಾ ರಾಮ್' ಹಾಡಿಗೆ ವಿರಾಟ್ ಕೊಹ್ಲಿ ಭಗವಂತ ಶ್ರೀರಾಮ ಬಿಲ್ಲು ಎಳೆಯುವಂತೆ ಪೋಸ್ ನೀಡಿದ್ದು ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

ಕೇಪ್ ಟೌನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ವೇಳೆ 'ರಾಮ್ ಸಿಯಾ ರಾಮ್' ಹಾಡಿಗೆ ವಿರಾಟ್ ಕೊಹ್ಲಿ ಭಗವಂತ ಶ್ರೀರಾಮ ಬಿಲ್ಲು ಎಳೆಯುವಂತೆ ಪೋಸ್ ನೀಡಿದ್ದು ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಂದು ವಿಕೆಟ್ ಗಳ ಸುರಿಮಳೆಯಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿತು. ಈ ವೇಳೆ ಆಫ್ರಿಕನ್ ಸ್ಪಿನ್ನರ್ ಕೇಶವ್ ಮಹಾರಾಜ್ ಬ್ಯಾಟಿಂಗ್ ಮಾಡಲು ಬಂದಾಗ, ಅವರನ್ನು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಭಿನ್ನ ರೀತಿಯಲ್ಲಿ ಸ್ವಾಗತಿಸಿದರು. ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಾಸ್ತವವಾಗಿ, ಮೊಹಮ್ಮದ್ ಸಿರಾಜ್ ಅವರ ವಿಧ್ವಂಸಕ ಬೌಲಿಂಗ್ ಮುಂದೆ ದಕ್ಷಿಣ ಆಫ್ರಿಕಾ 16 ಓವರ್‌ಗಳಲ್ಲಿ 34 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಭಾರತವನ್ನು 153 ರನ್‌ಗಳಿಗೆ ಸೀಮಿತಗೊಳಿಸಿತು. ಎರಡನೇ ಇನಿಂಗ್ಸ್‌ನಲ್ಲೂ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳು ಪತನಗೊಂಡವು. ಈ ಟೆಸ್ಟ್‌ನ ಮೊದಲ ದಿನವೇ ಒಟ್ಟು 23 ವಿಕೆಟ್‌ಗಳು ಬಿದ್ದವು.

ಕೇಶವ್ ಹನುಮಾನ್ ಭಕ್ತ ಮತ್ತು ಕೆಲವೊಮ್ಮೆ ಅವರ ಬ್ಯಾಟ್‌ನಲ್ಲಿ ಓಂ ಎಂದು ಬರೆದು ಆಡುತ್ತಾರೆ. ಅನೇಕ ಬಾರಿ ಅವರು ತಮ್ಮ ಪೋಸ್ಟ್‌ಗಳಲ್ಲಿ 'ಜೈ ಶ್ರೀ ರಾಮ್' ಎಂದು ಬರೆಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ