ಟೀಂ ಇಂಡಿಯಾ 
ಕ್ರಿಕೆಟ್

2ನೇ ಟಿ20: ಮತ್ತೆ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್; ಆಫ್ಘಾನ್ ವಿರುದ್ಧ ಗೆದ್ದ ಭಾರತ, ಸರಣಿ ಕೈವಶ!

ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಇಂದೋರ್: ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ಇಂದೋರ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ನಿಗದಿತ ಓವರ್ ನಲ್ಲಿ 172 ರನ್ ಗಳಿಗೆ ಸರ್ವಪತನ ಕಂಡಿತು. ಆಫ್ಘಾನಿಸ್ತಾನ ಪರ ಗುರ್ಬಾಜ್ 14, ನಬಿ 57, ಮೊಹಮ್ಮದ್ ನಬಿ 14, ನಜಿಬುಲ್ಲಾ 23 ಹಾಗೂ ಮುಜಿಬ್ 21 ರನ್ ಔಟಾಗಿದ್ದಾರೆ. 

ಭಾರತ ಪರ ಅರ್ಷದೀಪ್ ಸಿಂಗ್ 3, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರೆ ಶಿವಂ ದುಬೆ 1 ವಿಕೆಟ್ ಪಡೆದಿದ್ದಾರೆ. 

ಇನ್ನು ಆಫ್ಘಾನ್ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಭಾರತದ ಪರ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಇನ್ನು ವಿರಾಟ್ ಕೊಹ್ಲಿ 29 ರನ್ ಪೇರಿಸಿ ಔಟಾದರು. ಆದರೆ ಯುವ ಬ್ಯಾಟರ್ ಗಳಾದ ಯಶಸ್ವಿ ಜೈಸ್ವಾಲ್ 68 ಹಾಗೂ ಶಿವಂ ದುಬೆ ಅಜೇಯ 63 ರನ್ ಗಳ ನೆರವಿನಿಂದ ಭಾರತ 173 ರನ್ ಬಾರಿಸಿ 6 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು. 

ಆಫ್ಘಾನ್ ಪರ ಕರೀಂ ಜನತ್ 2, ಫಾರೂಕಿ ಮತ್ತು ನವೀನ್ ಉಲ್ ಹಕ್ ತಲಾ 1 ವಿಕೆಟ್ ಪಡೆದಿದ್ದಾರೆ. 

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್