ನಾಯಕ ರೋಹಿತ್ ಶರ್ಮಾ 
ಕ್ರಿಕೆಟ್

T20 World Cup ಟ್ರೋಫಿಯೊಂದಿಗೆ ತವರಿನತ್ತ ಹೊರಟ ಟೀಂ ಇಂಡಿಯಾ: ನಾಳೆ ದೆಹಲಿಗೆ ಆಗಮಿಸುವ ಸಾಧ್ಯತೆ

ಕೈಯಲ್ಲಿ ಟ್ರೋಫಿ ಹಿಡಿದು ವಿಮಾನದಲ್ಲಿ ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಾಯಕ ರೋಹಿತ್ ಶರ್ಮಾ, ಇದು ತವರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಟೀಂ ಇಂಡಿಯಾ ಗುರುವಾರ ಬೆಳಗ್ಗೆ ದೆಹಲಿಗೆ ಬಂದಿಳಿಯುವ ನಿರೀಕ್ಷೆಯಿದೆ.

ನವದೆಹಲಿ: ಬೆರಿಲ್ ಚಂಡಮಾರುತದ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಆಟಗಾರರು ಕೊನೆಗೂ ವಿಶೇಷ ಏರ್ ಇಂಡಿಯಾ ವಿಮಾನ ನಿಲ್ದಾಣದಲ್ಲಿ ತವರಿತ್ತ ಹೊರಟಿದ್ದಾರೆ.

ಕೈಯಲ್ಲಿ ಟ್ರೋಫಿ ಹಿಡಿದು ವಿಮಾನದಲ್ಲಿ ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಾಯಕ ರೋಹಿತ್ ಶರ್ಮಾ, ಇದು ತವರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಟೀಂ ಇಂಡಿಯಾ ಗುರುವಾರ ಬೆಳಗ್ಗೆ ದೆಹಲಿಗೆ ಬಂದಿಳಿಯುವ ನಿರೀಕ್ಷೆಯಿದೆ.

ಬಿಸಿಸಿಐ ಕೂಡಾ T20 ವಿಶ್ವಕಪ್ ಟ್ರೋಫಿಯ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದು, 'ಇದು ಮನೆಗೆ ಬರುತ್ತಿದೆ' ಎಂದು ಟ್ವೀಟ್ ಮಾಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಅಮಿತ್ ಶಾ ಆಯೋಜಿಸಿರುವ ವಿಶೇಷ ವಿಮಾನ, ಪಂದ್ಯಾವಳಿಯನ್ನು ವರದಿ ಮಾಡಲು ಹೋದ ಭಾರತೀಯ ಮಾಧ್ಯಮದ ಸದಸ್ಯರನ್ನು ಸಹ ಕರೆತರಲಿದೆ. ಆಟಗಾರರು, ಸಹಾಯಕ ಸಿಬ್ಬಂದಿ, ಕುಟುಂಬಗಳು ಮತ್ತು ಬಿಸಿಸಿಐ ಅಧಿಕಾರಿಗಳು ಸೇರಿದಂತೆ ಸುಮಾರು 70 ಜನರು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಮೂರು ದಿನಗಳಿಂದ ಸಿಲುಕಿಕೊಂಡಿದ್ದಾರೆ.

ಸ್ಪೋರ್ಟ್ಸ್ ಟಾಕ್ ಪ್ರಕಾರ, ವಿಶ್ವ ಚಾಂಪಿಯನ್‌ ಭಾರತೀಯ ಆಟಗಾರರು ಜುಲೈ 4 ರ ಗುರುವಾರ ಬೆಳಿಗ್ಗೆ 5 ಗಂಟೆಗೆ ನವದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸಂಭ್ರಮಾಚರಣೆ ಕಾರ್ಯಕ್ರಮ ಯೋಜಿಸಲಾಗಿದೆ, ಆದರೆ ವೇಳಾಪಟ್ಟಿಯನ್ನು ನಿರ್ಧರಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

SCROLL FOR NEXT