ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಮುಂಬೈನಲ್ಲಿ ಟೀಮ್ ಇಂಡಿಯಾ ವಿಜಯೋತ್ಸವ ಪರೇಡ್ ಗೆ ಉಚಿತ ಪ್ರವೇಶ

ಮುಂಬೈನಲ್ಲಿ ಸಂಜೆ 5 ಗಂಟೆಯಿಂದ ಮರೈನ್ ಡ್ರೈವ್‌ನ ಉದ್ದಕ್ಕೂ ತೆರೆದ ಬಸ್ ನಲ್ಲಿ ಭಾರತ ತಂಡದ ವಿಜಯೋತ್ಸವ ಮೆರವಣಿಗೆ ಸಾಗಲಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳುತ್ತದೆ.

ಪ್ರಧಾನಿ ಮೋದಿ ಜೊತೆ ಟೀಂ ಇಂಡಿಯಾ ಆಟಗಾರರ ಸಂವಾದ
Lingaraj Badiger
Updated On : 4 Jul 2024, 4:17 pm

ಮುಂಬೈ: ಐಸಿಸಿ ಟಿ20 ವಿಶ್ವಕಪ್ ಗೆದ್ದಿರುವ ಭಾರತೀಯ ಕ್ರಿಕೆಟ್ ತಂಡ ಮುಂಬೈನಲ್ಲಿ ಅದ್ಧೂರಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದು, ಈ ಸಂಭ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ಕಾರ್ಯದರ್ಶಿ ಅಜಿಂಕ್ಯ ನಾಯ್ಕ್ ಅವರು ಗುರುವಾರ ಹೇಳಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ಸಂಭ್ರಮಾಚರಣೆ ಮುಗಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ರೋಹಿತ್ ಶರ್ಮಾ ನೇತೃತ್ವದ ತಂಡ ಮುಂಬೈಗೆ ತೆರಳಲಿದೆ.

ಮುಂಬೈನಲ್ಲಿ ಸಂಜೆ 5 ಗಂಟೆಯಿಂದ ಮರೈನ್ ಡ್ರೈವ್‌ನ ಉದ್ದಕ್ಕೂ ತೆರೆದ ಬಸ್ ನಲ್ಲಿ ಭಾರತ ತಂಡದ ವಿಜಯೋತ್ಸವ ಮೆರವಣಿಗೆ ಸಾಗಲಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳುತ್ತದೆ.

Advertisement

Advertisement

Also Read

T20 ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ: ಪ್ರಧಾನಿ ಮೋದಿ ಭೇಟಿ, ಸಂವಾದ

ಈ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಮುಂಬೈ ಪೊಲೀಸ್ ಮತ್ತು ಬಿಸಿಸಿಐ ಸಹಯೋಗದೊಂದಿಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ನಾಯಕ್ ತಿಳಿಸಿದ್ದಾರೆ.

"ಮುಂಬೈ ಪೊಲೀಸ್ ಮತ್ತು ಬಿಸಿಸಿಐ ಮಾರ್ಗದರ್ಶನದಲ್ಲಿ, ನಾವು ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಸಾರ್ವಜನಿಕರಿಗೆ ಉಚಿತ ಪ್ರವೇಶವನ್ನು ನೀಡುತ್ತಿದ್ದೇವೆ. ಈ ಸಂಬಂಧ ನಾವು ನಿನ್ನೆ ಮುಂಬೈ ಪೊಲೀಸರೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಎಂಸಿಎ ಗರಿಷ್ಠ ಪೊಲೀಸ್ ಉಪಸ್ಥಿತಿಗೆ ವ್ಯವಸ್ಥೆ ಮಾಡಿದೆ. ಎಂಸಿಎ ಮತ್ತು ದೇಶಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತ ತಂಡವನ್ನು ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ ಎಂದು ನಾಯಕ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement